ಗುರುವಾರ , ಮೇ 6, 2021
31 °C

ಕೆರೆಯಲ್ಲಿ ನೀರಿನ ಮಟ್ಟ ಇಳಿಕೆ: ಮೀನುಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ನಗರದ ನಾಗರಕೆರೆಯಲ್ಲಿ ನೀರಿನ ಮಟ್ಟ ಕಡಿಮೆಯಾಗಿ ಸಹಸ್ರಾರು ಮೀನುಗಳು ಸಾವನ್ನಪ್ಪಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಕಳೆದ ಒಂದು ವಾರದಿಂದ ಕರೆಯಿಂದ ದುರ್ನಾತ ಹೊರಬರುತ್ತಿತ್ತು. ಇದರೊಂದಿಗೆ  ಸತ್ತ ಮೀನುಗಳನ್ನು ಕೆಲವು ಬಾಲಕರು ಹಿಡಿದುಕೊಂಡು ಊರ ಒಳಗೆ ತರುತ್ತಿದ್ದುದನ್ನು  ಸಾರ್ವಜನಿಕರು ಗಮನಿಸಿದಾಗ ಕೆರೆಯಲ್ಲಿನ ಸಣ್ಣ ಹೊಂಡದಲ್ಲಿ ಸಹಸ್ರಾರು ಮೀನುಗಳು ಸತ್ತು ವಾಸನೆ ಹೊರಬರುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.`ನಾವು ಕೆರೆ ಏರಿ ಮೇಲೆ ನಿತ್ಯವೂ ನಡೆದಾಡುತ್ತೇವೆ. ಕಳೆದ ಒಂದು ವಾರದಿಂದ ಇಲ್ಲಿ  ದುರ್ನಾತ ಹೊರಬರುತ್ತಿದ್ದು, ಮೂಗು ಮುಚ್ಚಿಕೊಂಡು ನಡೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಾವನ್ನಪ್ಪಿರುವ ಮೀನುಗಳಿಂದ ರೋಗ ರುಜಿನಗಳು ಹರಡುವ ಮುನ್ನ ಈ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು~ ಎಂದು ನಾಗರಾಜ್ ಒತ್ತಾಯಿಸಿದ್ದಾರೆ.

 

ಸಾರ್ವಜನಿಕರ ದೂರಿಗೆ ಪ್ರತಿಕ್ರಿಯಿಸಿರುವ ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಕೆರೆಯಲ್ಲಿ ನೀರಿನ ಸಾಮರ್ಥ್ಯ ಮೀರಿ ಹೆಚ್ಚು ಮೀನುಗಳು ಇದ್ದುದರಿಂದ ಮೀನುಗಳು ಸಾವನ್ನಪ್ಪಿವೆ. ಇದನ್ನು ಸಂಬಂಧಿಸಿದ ಗುತ್ತಿಗೆದಾರರಿಗೆ ತಿಳಿಸಿದ್ದು, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೆೀವೆ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.