ಭಾನುವಾರ, ಮೇ 9, 2021
20 °C

ಕೆರೆಯಲ್ಲಿ ಮುಳುಗಿ ದಂಪತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ಬಲೆಗೆ ಬಿದ್ದ ಮೀನುಗಳನ್ನು ಹಿಡಿಯುತ್ತಿದ್ದ ವೇಳೆ ತೆಪ್ಪ ಕೆರೆಗೆ ಉರುಳಿಬಿದ್ದ ಪರಿಣಾಮ ದಂಪತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಪಾತಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಬಿಳ್ಳೂರು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೋರನಕಣಿವೆ ಗ್ರಾಮದ ಪತಿ ಮಂಜುನಾಥ (45) ಮತ್ತು ಪತ್ನಿ ಮಂಜುಳಾ (35) ಮೃತಪಟ್ಟವರು.ತಾಲ್ಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಭಾನುವಾರ ಬೆಳಿಗ್ಗೆ ಮಂಜುನಾಥ್ ಮತ್ತು ಮಂಜುಳಾ ಇಬ್ಬರು ತೆಪ್ಪದಲ್ಲಿ ಕೂತು ಬಲೆಗೆ ಬಿದ್ದ ಮೀನುಗಳನ್ನು ಎಳೆದುಕೊಳ್ಳುತ್ತಿದ್ದರು. ತೆಪ್ಪದಲ್ಲಿ ಇಬ್ಬರೂ ಒಂದು ಕಡೆ ಕೂತಿದ್ದ ಕಾರಣ ತೆಪ್ಪ ನೀರಿನಲ್ಲಿ ಉರುಳಿಬಿತ್ತು. ಇಬ್ಬರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ.

ಚಿಂತಾಮಣಿಯ ಅಗ್ನಿಶಾಮಕ ದಳದ ಪೊಲೀಸರು ಶೋಧಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ.ಪವಾರ್, ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಲ್.ಶ್ರೀನಿವಾಸಯ್ಯ ಮತ್ತು ಪಾತಪಾಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.