ಶನಿವಾರ, ಜನವರಿ 25, 2020
29 °C

ಕೆರೆಯಲ್ಲಿ ಮುಳುಗಿ ಯುವಕ ಸಾವು

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಎಚ್‌ಎಎಲ್‌ ಬಳಿಯ ದೊಡ್ಡ­ನೆಕ್ಕುಂದಿ­ಯಲ್ಲಿ ಮಂಗಳವಾರ ನಡೆದಿದೆ.ಇಸ್ಲಾಂಪುರ ನಿವಾಸಿ ಸಾದಿಕ್‌ ಮೃತಪಟ್ಟವರು. ಕೂಲಿ ಕೆಲಸ ಮಾಡುತ್ತಿದ್ದ ಅವರು ಸಂಜೆ 4 ಗಂಟೆ ಸುಮಾರಿಗೆ ದೊಡ್ಡನೆಕ್ಕುಂದಿ ಕೆರೆಗೆ ಈಜಲು ಹೋಗಿದ್ದಾಗ ಘಟನೆ ನಡೆದಿದೆ ಎಂದು ಎಚ್‌ಎಎಲ್‌ ಪೊಲೀಸರು ತಿಳಿಸಿದ್ದಾರೆ.ಆತ್ಮಹತ್ಯೆ: ಸಲ್ಮಾತಾಜ್‌ (23) ಎಂಬುವರು  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಗಜೀವನ್‌ರಾಮ್‌ನಗರದಲ್ಲಿ ಬುಧವಾರ ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಕೊಠಡಿಯ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು  ಪೊಲೀಸರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)