ಸಂತೇಮರಹಳ್ಳಿ: `ರೈತರಿಗ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 56 ಕೋಟಿ ರೂ ಮಂಜೂರು ಮಾಡಿದೆ~ ಎಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.

ಹೋಬಳಿಯ ಹೊಂಗನೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಹಿರೇಕೆರೆ ಅಭಿವೃದ್ಧಿಗೆ ಹಮ್ಮಿಕೊಂಡಿರುವ 2.20 ಕೋಟಿ ಮೊತ್ತದ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಸರ್ಕಾರ ರಾಜ್ಯದ ಉದ್ದಗಲಕ್ಕೂ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆಗಳಿಗೂ ಅನುದಾನ ಮಂಜೂರಾಗಿದೆ. ಅಚ್ಚುಕಟ್ಟುದಾರರು ಉತ್ತಮ ಫಸಲು ತೆಗೆಯಬೇಕೆಂಬುದು ಸರ್ಕಾರದ ಉ್ದ್ದದೇಶ ಎಂದರು.

ಕೆರೆಗೆ ಸರಾಗವಾಗಿ ನೀರು ಹರಿದು ಬರುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಕಾಮಗಾರಿ ಕೈಗೊಳ್ಳಬೇಕು. ಹೆಚ್ಚು ನೀರು ಸಂಗ್ರಹವಾಗಲು ಹೂಳು ತೆಗೆಸಬೇಕು. ಒತ್ತುವರಿ ತೆರವುಗೊಳಿಸಿ ಪ್ರತಿಯೊಬ್ಬ ಅಚ್ಚುಕಟ್ಟುದಾರರಿಗೂ ಕೆರೆ ಸಂರಕ್ಷಣೆ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.

ಕಳೆದ ಒಂದು ವರ್ಷದ ಹಿಂದೆ ಈ ಕೆರೆಯ ಅಭಿವೃದ್ಧಿಗೆ ನೀರಾವರಿ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಬೇಕಾಗಿತ್ತು. ರಾಜಕೀಯ ಏರಿಳಿತಗಳಿಂದ ಕಾಮ ಗಾರಿ ನೆನೆಗುದಿಗೆ ಬಿದ್ದಿತು. ಇದರ ಪರಿಣಾಮ ರೈತರು ಫಸಲು ತೆಗೆಯಲಾಗಲಿಲ್ಲ ಎಂದರು.

ಜಿ.ಪಂ. ಸದಸ್ಯೆ ಲಕ್ಷ್ಮೀ, ತಾ.ಪಂ. ಅಧ್ಯಕ್ಷೆ ಪದ್ಮಾ ಚಂದ್ರು, ಗ್ರಾ.ಪಂ. ಅಧ್ಯಕ್ಷೆ ಜೀನತ್ಬೀ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸಲು, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಮು, ಪಿ. ನಂಜಯ್ಯ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.