ಮಂಗಳವಾರ, ಮಾರ್ಚ್ 9, 2021
23 °C

ಕೆಲವು ಕುಲಪತಿಗಳು ಡಕಾಯಿತರಿಗಿಂತ ಕಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಲವು ಕುಲಪತಿಗಳು ಡಕಾಯಿತರಿಗಿಂತ ಕಡೆ

ಬಳ್ಳಾರಿ: ‘ರಾಜ್ಯದ ಕೆಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಡಕಾಯಿತರಿಗಿಂತ ಕಡೆಯಾಗಿದ್ದಾರೆ. ಅವರನ್ನು ಕುಲಪತಿಗಳು ಎಂದು ಕರೆಯುವುದಾದರೂ ಹೇಗೆ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಂಗಳವಾರ ಇಲ್ಲಿ ಪ್ರಶ್ನಿಸಿದರು.ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ನಡೆದ 7ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಎಲ್ಲರೂ ಸರಿ ಇಲ್ಲ ಎನ್ನಲಾಗುವುದಿಲ್ಲ. ಆದರೆ ರಾಜ್ಯದ ಶ್ರೇಷ್ಠ ವಿಶ್ವವಿದ್ಯಾಲಯವಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯನ್ನು ನೋಡಿದರೆ ಉನ್ನತ ಶಿಕ್ಷಣ ಸಚಿವನಾಗಿ ನನಗೆ ನಾಚಿಕೆಯಾಗುತ್ತದೆ. ಅಲ್ಲಿನ ಆಡಳಿತ ವರ್ಗ ಭ್ರಷ್ಟವಾಗಿದೆ. ಮೈಸೂರು ವಿಶ್ವವಿದ್ಯಾಲಯವಾದರೂ ಏನಾಗಿದೆ’ ಎಂದು ಮಾರ್ಮಿಕವಾಗಿ ಕೇಳಿದರು.‘ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟ, ಮೌಲ್ಯ ಕುಸಿದಿವೆ. ಅಲ್ಲಿನ ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳು ಹೋರಾಟ ಮಾಡಬೇಕು. ಇನ್ನಾದರೂ ಹೊಸ ಜನಾಂಗಕ್ಕೆ ಮಾದರಿಯಾದ, ಉತ್ತಮ ಶಿಕ್ಷಣ ನೀಡಲು  ಮುಂದಾಗಬೇಕು’ ಎಂದರು.ಪ್ರತ್ಯೇಕ ವಿಶ್ವವಿದ್ಯಾಲಯ:  ಬೆಂಗಳೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು, ಗೃಹ ವಿಜ್ಞಾನ ಕಾಲೇಜು ಸೇರಿ ಒಂದು ಪ್ರತ್ಯೇಕ ವಿ.ವಿ ಹಾಗೂ ಮಂಡ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮತ್ತೊಂದು ಪ್ರತ್ಯೇಕ ವಿ.ವಿ ಎಂದು ಘೋಷಿಸಲಾಗುವುದು ಎಂದರು.* ಬೆಂಗಳೂರಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರದಬ್ಬಲು ಸೂಚಿಸಲಾಗಿದೆ. ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ

-ಬಸವರಾಜ ರಾಯರಡ್ಡಿ, ಉನ್ನತ ಶಿಕ್ಷಣ ಸಚಿವ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.