ಸೋಮವಾರ, ಮಾರ್ಚ್ 1, 2021
31 °C

ಕೆ.ಸಿ.ರೆಡ್ಡಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಸಿ.ರೆಡ್ಡಿ ನಿಧನ

ಬೆಂಗಳೂರು: ಲೋಕೋಪಯೋಗಿ ಇಲಾಖೆಯ (ನೀರಾವರಿ ಮತ್ತು ವಿದ್ಯುತ್‌) ಆಯುಕ್ತರಾಗಿ ನಿವೃತ್ತರಾಗಿದ್ದ ಕೆ.ಸಿ.ರೆಡ್ಡಿ (86) ಗುರುವಾರ ಬೆಳಗಿನ ಜಾವ 2.15ಕ್ಕೆ ಅವರ ಸ್ವಗೃಹದಲ್ಲಿ ನಿಧನರಾದರು.ಜಯನಗರ 8ನೇ ಬ್ಲಾಕ್‌ನಲ್ಲಿ ವಾಸವಾಗಿದ್ದ ಅವರು, ವಯೋಸಹಜ ಕಾಯಿಲೆಗಳ ಜತೆಗೆ ಪಾರ್ಕಿನ್‌ಸನ್‌ ರೋಗದಿಂದ ಬಳಲುತ್ತಿದ್ದರು. ಮೃತರು ಪತ್ನಿ ಕೆ.ನಾಗವೇಣಿ ಅವರನ್ನು ಅಗಲಿದ್ದಾರೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 1994ರಿಂದ 2004ರ ಅವಧಿಯಲ್ಲಿ ನೀರಾವರಿ ಯೋಜನೆಗಳ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರಾಗಿ, 2004ರಿಂದ 2007ರವರೆಗೆ ಮುಖ್ಯಮಂತ್ರಿ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.ಕೆ.ಸಿ.ರೆಡ್ಡಿ ಅವರಿಗೆ 1997ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2006ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿವೆ.ಮೃತರ ಅಂತ್ಯಕ್ರಿಯೆ ಗುರುವಾರ ಸಂಜೆ 4ಕ್ಕೆ ವಿಲ್ಸನ್‌ ಗಾರ್ಡನ್‌ನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.