ಕೆ. ಗೊಲ್ಲಹಳ್ಳಿ: ಪ್ರಾಥಮಿಕ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ

7

ಕೆ. ಗೊಲ್ಲಹಳ್ಳಿ: ಪ್ರಾಥಮಿಕ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ

Published:
Updated:

 ರಾಜರಾಜೇಶ್ವರಿನಗರ:  ಸಮಾಜದಲ್ಲಿ ತುಳಿತಕ್ಕೆ ಒಳಗಾದ ನೊಂದ, ದುರ್ಬಲ ಹಾಗೂ ಹಿಂದುಳಿದ ಜನಾಂಗದ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವ ಮೂಲಕ ತಮ್ಮ ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದು  ಜಿ.ಪಂ.ಸದಸ್ಯ ಎ.ಶಿವಕುಮಾರ್ ಅಭಿಪ್ರಾಯಪಟ್ಟರು. ಕೆ.ಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಮಕ್ಕಳಿಗೆ ಸೈಕಲ್‌ಗಳನ್ನು ವಿತರಿಸಿ ಅವರು ಮಾತನಾಡಿದರು.`ಶಿಕ್ಷಣದ ಜೊತೆಗೆ ಸಂಸ್ಕೃತಿ, ಭಾಷಾಭಿಮಾನ, ಮಾನವೀಯ ಮೌಲ್ಯ, ದೇಶದಲ್ಲಿ ಬೇರೂರಿರುವ ಜಾತೀಯತೆ , ಭ್ರಷ್ಟಾಚಾರ ತೊಲಗಿಸುವ ವಿಷಯಗಳನ್ನು ಮಕ್ಕಳಿಗೆ ತಿಳಿ ಹೇಳುವ ಮೂಲಕ ಶಿಕ್ಷಕರು ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಬೇಕು~ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ.ರಾಮಚಂದ್ರ ಕರೆ ನೀಡಿದರು.ತಾ.ಪಂ. ಮಾಜಿ ಅಧ್ಯಕ್ಷ ಕೆ.ವಿ.ಕೃಷ್ಣಪ್ಪ, ತಾ.ಪಂ. ಸದಸ್ಯೆ ಪ್ರಮೀಳಾ ಮಂಜುನಾಥ್, ಗ್ರಾ.ಪಂ. ಅಧ್ಯಕ್ಷ ಬೆಟ್ಟಯ್ಯ, ಉಪಾಧ್ಯಕ್ಷ ಸಂಪತ್‌ರಾಜು ಮುಖಂಡರಾದ ಕೆ.ವೈ.ಶಿವಣ್ಣ, ಬಸವರಾಜು, ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

   

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry