ಭಾನುವಾರ, ಜೂನ್ 20, 2021
23 °C

ಕೇಂದ್ರಕ್ಕೆ ಹೈದರಾಬಾದ್ ಕರ್ನಾಟಕ ಶಾಸಕರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ತೊಗರಿಗೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್‌ಗೆ 5000 ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ಮನವಿಪತ್ರ ರವಾನಿಸಿರುವ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರೂ ಆಗಿರುವ ಅಲ್ಲಮ ಪ್ರಭು ಪಾಟೀಲ, ರಾಜ್ಯ ಖಾದಿ ಮಂಡಳಿ ಅಧ್ಯಕ್ಷ ಶಂಕರ ಗೌಡ ಹರವಿ ಅವರು, ತೊಗರಿ ಹೆಚ್ಚು ಬೆಳೆಯುತ್ತಿರುವ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕ ಪ್ರದೇಶದ ರೈತರಿಗೆ ಬೆಂಬಲ ಬೆಲೆ ಮೊತ್ತ ಹೆಚ್ಚಿಸಿ ಅನುಕೂಲ ಮಾಡಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.ಈಶಾನ್ಯ ಕರ್ನಾಟಕದ ಗುಲ್ಬರ್ಗ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಹಾಗೂ ಬಾಗಲಕೋಟೆ  ಜಿಲ್ಲೆಗಳಲ್ಲಿ ತೊಗರಿ ಪ್ರಮುಖ ಬೆಳೆಯಾಗಿದ್ದು, ಅತಿ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ.  ಸದ್ಯ  ಪ್ರತಿ ಕ್ವಿಂಟಲ್ ತೊಗರಿಗೆ 3,200 ರೂಪಾಯಿ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಇದನ್ನು 5000 ರೂಪಾಯಿಗಳಾಗಿ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.  ಬರಪೀಡಿತ ಪ್ರದೇಶಗಳೂ ಆಗಿರುವುದರಿಂದ ಬೆಂಬಲ ಬೆಲೆಯ ಪ್ರಮಾಣವನ್ನು ಮರು ನಿಗದಿಪಡಿಸಿ ಕೇಂದ್ರ ಸರ್ಕಾರ ಇಲ್ಲಿನ ರೈತರ ಸಂಕಷ್ಟದ ಬದುಕಿಗೆ ನೆರವಾಗಬೇಕು ಎಂದು ಅಲ್ಲಮ ಪ್ರಭು ಮತ್ತಿತರ ಸದಸ್ಯರು ಮನವಿ ಮಾಡಿದ್ದಾರೆ.ಸಮಿತಿಗೆ ಪರಿಶೀಲಿಸಿ:

ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳ ಖರೀದಿ ಮತ್ತು ಮಾರುಕಟ್ಟೆ ಬೆಲೆ ನಿಗದಿ ಸಮಿತಿ ರಚನೆ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಪ್ರಸ್ತುತ ಜಿಲ್ಲೆಗಳ ಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.