ಬೈಲಹೊಂಗಲ: ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ವಾಗಿದ್ದು, ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಜಯಭೇರಿಯೊಂದಿಗೆ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬೈಪಾಸ್ ರಸ್ತೆಯ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಎಲ್ಲ ವರ್ಗದ ಅಭಿವೃದ್ಧಿಗೆ ಜನಪರ ಬಜೆಟ್ ಮಂಡನೆ ಮಾಡಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ ಎಂದರು. ಕೆ.ಡಿ.ಪಿ. ಸಭೆಯನ್ನು ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸುವ ಮೂಲಕ ಜನರ ಬಳಿಗೆ ಸರ್ಕಾರ ತೆರಳಿ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಲಕ್ಷ್ಮಿ ಹೆಬ್ಬಾಳ್ಕರ ಕಳೆದ 2–3 ವರ್ಷಗಳಿಂದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಎಂದು ಶೀಘ್ರದಲ್ಲಿ ಘೋಷಣೆಯಾಗಲಿದೆ ಎಂದರು.
ಜಿಲ್ಲೆಯ ರಸ್ತೆಗಳು ಹದಗೆಟ್ಟಿದ್ದು, ಬಿ.ಜೆ.ಪಿ. ಸರ್ಕಾರ ಖಜಾನೆ ಖಾಲಿ ಮಾಡಿದ್ದು, ಬರುವ ಮೂರು ತಿಂಗಳಲ್ಲಿ ಜಿಲ್ಲೆಯ ಎಲ್ಲ ರಸ್ತೆಗಳ ಸುಧಾರಣೆ ಹಾಗೂ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದರು.

ಬೆಳಗಾವಿ ಮಹಾನರಗರಲ್ಲಿ ₨600 ಕೋಟಿ ವೆಚ್ಚದಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ, ₨150 ಕೋಟಿ ವೆಚ್ಚದಲ್ಲಿ ಜಿಲ್ಲಾ ಆಸ್ಪತ್ರೆ ಮೇಲ್ದರ್ಜೆಗೆ ಏರಿಕೆ, ಕೇಂದ್ರ ಸರ್ಕಾರದಿಂದ ₨200 ಕೋಟಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕಕ್ಕೆ ಅಂಡರ್ಗ್ರೌಂಡ್ ವ್ಯವಸ್ಥೆ ಮಂಜೂರಾಗಿದೆ ಎಂದರು.

ಪಕ್ಷದ ಸಿದ್ಧಾಂತ ಹಾಗೂ ಅಭಿವೃದ್ಧಿ ಕಾಯರ್ಗಳ ಕುರಿತು ಜನರಿಗೆ ತಿಳಿವಳಿಕೆ ನೀಡಿ, ಬೈಲಹೊಂಗಲ ಮತಕ್ಷೇತ್ರದಲ್ಲಿ ಕೆ.ಜೆ.ಪಿ. ಹಾಗೂ ಬಿ.ಜೆ.ಪಿ. ವಿರುದ್ಧ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷಕ್ಕೆ ಮತ ಹೆಚ್ಚಿನ ಮತಗಳನ್ನು ಪಡೆಯಲು ದುಡಿಯಬೇಕು ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ ‘ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದ್ದು, ಬಡವರು ಸೇರಿದಂತೆ ಎಲ್ಲ ವರ್ಗಗಳ ಪರ ಸರ್ಕಾರವಾಗಿದೆ ಎಂದರು. ವಿಧಾನಸಭೆಯಲ್ಲಿ ಕೆ.ಜೆ.ಪಿ.ಗೆ ಮತ ನೀಡುವಂತೆ ಹೇಳಿದ ಯಡಿಯೂರಪ್ಪ, ಲೋಕಸಭೆಯಲ್ಲಿ ಬಿ.ಜೆ.ಪಿ. ಮತ ನೀಡುವಂತೆ ಹೇಳುವ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನರು ಮೂರ್ಖರಲ್ಲ ಎಂಬುದನ್ನು ಯಡಿಯೂರಪ್ಪ ಅವರಿಗೆ ಉತ್ತರ ನೀಡಬೇಕು. ಕಳೆದ ಹತ್ತು ವರ್ಷಗಳಿಂದ ಸಂಸದ ಸುರೇಶ ಅಂಗಡಿ ಮತಕ್ಷೇತ್ರವನ್ನು ನಿರ್ಲಕ್ಷ ಮಾಡಿದ್ದು, ಈ ಬಾರಿ ನನಗೆ ಸೇವೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕೌಜಲಗಿ ಮಾತನಾಡಿ, ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಗೂ ರವಿ ನಾಯ್ಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ವೀರಕುಮಾರ ಪಾಟೀಲ, ಮಾಜಿ ಶಾಸಕ ಸುಭಾಸ ಕೌಜಲಗಿ, ಪುರಸಭೆ ಅಧ್ಯಕ್ಷೆ ಶೋಭಾ ವಾಲಿ, ಉಪಾಧ್ಯಕ್ಷೆ ಸುಶೀಲಾ ಹೊಂಗಲ, ಬಸವರಾಜ ಬಾಳೇಕುಂದ ರಗಿ, ರಾಜಶೇಖರ ಮೂಗಿ, ಸಂಜಯ ಗಡತರವನರ, ಗೀತಾ ದೇಸಾಯಿ, ಕಿರಣ ಸಾಧುನವರ, ಬ್ಲಾಕ್ ಅಧ್ಯಕ್ಷ ಶಿವರುದ್ರ ಹಟ್ಟಿಹೊಳಿ, ಮಲ್ಲಪ್ಪ ಮುರಗೋಡ, ಡಿ.ಜಿ.ಮಲ್ಲೂರ, ಜಯಶ್ರೀ ಮಾಳಗಿ, ಮುರಗೋಡ ಬ್ಲಾಕ್ ಅಧ್ಯಕ್ಷ ಶಂಕರಗೌಡ ಪಾಟೀಲ, ಶಿವಾಜಿ ಸುಂಠಕರ ಸೇರಿದಂತೆ ಹಲವಾರು ಗಣ್ಯರು ವೇದಿಕೆಯಲ್ಲಿದ್ದರು.

ಪುರಸಭೆ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಮತಕ್ಷೇತ್ರದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.