ಶುಕ್ರವಾರ, ಜೂನ್ 18, 2021
23 °C

ಕೇಂದ್ರದ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಮೀಸಲು ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಕೇಂದ್ರ ಯೋಜನಾ ಆಯೋಗವು ರಚಿಸಿದ್ದ ವಿಶೇಷ ಕಾರ್ಯಪಡೆಯ ಶಿಫಾರಸಿನಂತೆ ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ/ ಪಂಗಡದ (ಎಸ್.ಸಿ., ಎಸ್.ಟಿ.) ಅಭಿವೃದ್ಧಿಗಾಗಿ ಶೇಕಡಾವಾರು ಮೀಸಲು ಗುರಿ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ಮುಕುಲ್ ವಾಸ್ನಿಕ್ ಶನಿವಾರ ಇಲ್ಲಿ ಹೇಳಿದರು.ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 2012- 13ನೇ ಸಾಲಿನಿಂದ ಇದು ಜಾರಿಯಾಗಲಿದೆ. ಪ್ರಮುಖ ಮೂಲಸೌಕರ್ಯ ಹಾಗೂ ಆದಿವಾಸಿ, ಹಿಂದುಳಿದ, ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಕೆಲವು ಇಲಾಖೆಗಳಿಗೆ ಮಾತ್ರ ಮೀಸಲು ನಿಗದಿ ಮಾಡಿಲ್ಲ. ಪ್ರಸ್ತುತ 1.5 ಕೋಟಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಶಿಷ್ಯವೇತನ ನೀಡುತ್ತಿದ್ದು, ಈಚೆಗೆ ಎಸ್.ಸಿ./ಎಸ್.ಟಿ. ವಿದ್ಯಾರ್ಥಿಗಳ ಶಿಷ್ಯವೇತನ ಪರಿಷ್ಕರಣೆ ಮಾಡಲಾಗಿದೆ. ಶಿಷ್ಯವೇತನದ ಪರಿಷ್ಕರಣೆಯ ಲಾಭವನ್ನು 75 ಲಕ್ಷ ವಿದ್ಯಾರ್ಥಿಗಳು ಪಡೆಯಲಿದ್ದಾರೆ ಎಂದು ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.