ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗದ ಆರಂಭದ ದಿನವೇ ನಾಲ್ವರು ಹಿರಿಯ ಸಚಿವರು ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆಂದು ಹೇಳಲಾಗಿದೆ. ಆದರೆ, ಈ ಸುದ್ದಿಯನ್ನು ಸಚಿವರಿಬ್ಬರು ತಳ್ಳಿಹಾಕಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಂನಬಿ ಆಜಾದ್, ಸಾಗರೋತ್ತರ ವ್ಯವಹಾರಗಳ ಸಚಿವ ವಯಲಾರ್ ರವಿ, ಕಾನೂನು ಸಚಿವ ಸಲ್ಮಾನ್ ಖುರ್ಷಿದ್, ಗ್ರಾಮೀಣ ಅಭಿವೃದ್ಧಿ ಸಚಿವ ಜೈರಾಂ ರಮೇಶ್ ಸೋನಿಯಾ ಅವರಿಗೆ ಪತ್ರ ಬರೆದು ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆ ಮಾಡಿ ಪಕ್ಷದ ಸಂಘಟನೆಗೆ ತೊಡಗಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ವಯಲಾರ್ ರವಿ ಹಾಗೂ ಜೈರಾಂ ರಮೇಶ್ ವರದಿಯನ್ನು ನಿರಾಕರಿಸಿದ್ದಾರೆ.

ಜೈರಾಂ ಮತ್ತು ಖುರ್ಷಿದ್ ಮಂಗಳವಾರ ಸಂಜೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಈ ಸುದ್ದಿ ಹರಡಿದೆ. ಸಂಸತ್ತಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲು ಈ ಸಭೆ ನಡೆಯಿತು ಎಂದು ಕೆಲವರು ವಿವರಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ ತಕ್ಷಣ ಖುರ್ಷಿದ್ ಪಕ್ಷದ ಅಧ್ಯಕ್ಷರಿಗೆ ಪತ್ರ ಬರೆದು ರಾಜೀನಾಮೆ ಕೊಡುವ ಇಂಗಿತ ವ್ಯಕ್ತಪಡಿಸಿದ್ದರು. ಇದು ಹಳೇ ವಿಷಯ ಎಂದು ವಿಶ್ಲೇಷಿಸಲಾಗುತ್ತಿದೆ.
ನಾಲ್ವರು ಸಚಿವರ ರಾಜೀನಾಮೆ ವದಂತಿ ಬೆನ್ನಲ್ಲೇ ಬಜೆಟ್ ಅಧಿವೇಶನದ ಬಳಿಕ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಆಗಲಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಹರಡಿದೆ. ಸೋನಿಯಾ ಮತ್ತು ಪ್ರಧಾನಿ ಸಂಪುಟ ಪುನರ್ರಚನೆ ಕುರಿತು ಶೀಘ್ರ ಸಮಾಲೋಚನೆ ನಡೆಸಲಿದ್ದಾರೆ ಎಂದೂ ನಂಬಲಾಗಿದೆ. `ಆಂಧ್ರದ ಉಪ ಚುನಾವಣೆ ಸಂಬಂಧ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಪ್ರಸ್ತಾಪ ಮಾಡಿಲ್ಲ~ ಎಂದು ರವಿ ಹೇಳಿದ್ದಾರೆ.

ರವಿ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆಂಧ್ರದ ಉಸ್ತುವಾರಿ ವಹಿಸುವ ಮಾತುಗಳು ಪಕ್ಷದಲ್ಲಿ ಕೇಳಿಬರುತ್ತಿದೆ. ಸದ್ಯ ಆಂಧ್ರದ ಉಸ್ತುವಾರಿ ಹೊತ್ತಿರುವ ಗುಲಾಂ ನಬಿ ಆಜಾದ್ ಅವರಿಗೆ ಪ್ರತ್ಯೇಕ ತೆಲಂಗಾಣ ಚಳವಳಿ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಬಾಯಿಸುವುದು ಕಷ್ಟವಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.