ಮಂಗಳವಾರ, ಮೇ 11, 2021
25 °C

ಕೇಂದ್ರದ ನಿಲುವೇ ಮುಖ್ಯ: ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡಬೇಕು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಕಕ್ಷಿಗಾರ ಎಂದು ಪರಿಗಣಿಸಿ ನೋಟಿಸ್  ನೀಡಿದೆ. ತನ್ನ ನಿಲುವು ಸ್ಪಷ್ಟಪಡಿಸುವ ಜವಾಬ್ದಾರಿ ಈಗ ಕೇಂದ್ರ ಸರ್ಕಾರದ ಮೇಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.ಕೇಂದ್ರ ಸರ್ಕಾರ ಇನ್ನೂ ನಿಲುವನ್ನು ಸ್ಪಷ್ಟಪಡಿಸದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಸಂಬಂಧ ಏಕಪಕ್ಷೀಯವಾಗಿ ತೀರ್ಪು ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯ ಸರ್ಕಾರವೂ ವಾದವನ್ನು ಸಮರ್ಥವಾಗಿಯೇ ಮಂಡಿಸಿದೆ ಎಂದು ಹೇಳಿದರು.ಕೇಂದ್ರ ಸರ್ಕಾರವನ್ನು ಕಕ್ಷಿಗಾರ ಎಂದು ಪರಿಗಣಿಸಿ ಸುಪ್ರೀಂಕೋರ್ಟ್ ನೊಟೀಸ್ ನೀಡಿ ಒಂದೂವರೆ ವರ್ಷ ಕಳೆದಿದೆ. ಕೇಂದ್ರ ಮಾತ್ರ ನಿಲುವನ್ನು ತಿಳಿಸಿಲ್ಲ. ಈ ಸಂಬಂಧ ಹಲವಾರು ಬಾರಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್, ಆಗ ಕಾನೂನು ಸಚಿವರಾಗಿದ್ದ ಎಂ.ವೀರಪ್ಪ ಮೊಯ್ಲಿ ಅವರನ್ನು ಭೇಟಿ ಮಾಡಿ, ವಿಷಯ ಕುರಿತು ಮನವರಿಕೆ ಮಾಡಿದ್ದೆ. ಈಗಲೂ ಕಾಲ ಮಿಂಚಿಲ್ಲ. ರಾಜ್ಯದ ಸಂಸದರು, ಅದರಲ್ಲೂ ಕೇಂದ್ರದಲ್ಲಿ ಸಚಿವರಾಗಿರುವವರು ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರುವುದು ಅಗತ್ಯ ಎಂದು ಹೇಳಿದರು.ಆರ್‌ಟಿಇ: ಶಿಕ್ಷಣ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ಅಗತ್ಯವಿರುವ ಹಣಕಾಸು ಭರಿಸಲು ರಾಜ್ಯಕ್ಕೆ ಸಾಧ್ಯವಿಲ್ಲ.

ಹಣಕಾಸು ಒದಗಿಸುವ ಬಗ್ಗೆ ಸ್ಪಷ್ಟನೆ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿದ್ದು, ಇನ್ನೂ ಮಾಹಿತಿ ಬಂದಿಲ್ಲ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.