ಭಾನುವಾರ, ಮೇ 9, 2021
27 °C

ಕೇಂದ್ರದ ಮಸೂದೆಗೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಕೋಮು ಹಾಗೂ ಲಕ್ಷಿತ ಹಿಂಸೆ ತಡೆ ಶಾಸನವು ಹಿಂದು ವಿರೋಧಿಯೂ ಆಗಿದ್ದು, ಈ ಕಾನೂನನ್ನು ಜಾರಿಗೆ ತರುವುದು ಬೇಡ ಎಂದು ವಿಶ್ವ ಹಿಂದು ಪರಿಷತ್‌ನ ರಾಜ್ಯ ಸಂಚಾಲಕ ಸೂರ್ಯನಾರಾಯಣ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮು ಹಾಗೂ ಲಕ್ಷಿತ ಹಿಂಸೆ ತಡೆ ಶಾಸನ ಜಾರಿಗೆ ಆಗಬಾರದು, ಇಲ್ಲಿಯವರೆಗೆ ಶಾಂತಿ ಸೌಹಾರ್ದದಿಂದ ಇದ್ದ ದೇಶದಲ್ಲಿ, ಕಾಂಗ್ರೆಸ್ ಪಕ್ಷ ಈ ಮಸೂದೆ ಮೂಲಕ ಹಿಂದು- ಮುಸ್ಲಿಮರನ್ನು ಬೇರ್ಪಡೆ ಮಾಡಿ ಸಾಮರಸ್ಯವನ್ನು ಕೆದಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಅಲ್ಪಸಂಖ್ಯಾತ ರೊಂದಿಗೆ ಜೋಡಿಸಿ ಅವರಿಗೆ ರಕ್ಷಣೆ ಕೊಡುವ ನೆಪದಲ್ಲಿ ಕೇಂದ್ರ ಸರ್ಕಾರ ಈ ಕಾನೂನು ಜಾರಿಗೆ ತರಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.ಈ ಮಸೂದೆಯನ್ನು ವಿರೋಧಿಸಿ ದೇಶದಾದ್ಯಂತ ವಿಶ್ವ ಹಿಂದು ಪರಿಷತ್ ವತಿಯಿಂದ ಜನಜಾಗೃತಿ ನಡೆಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾ ರರಿಗೆ ಮನವಿ ಸಲ್ಲಿಸಲಾಗುವುದು ಎಂದರು.ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದು ಪರಿಷತ್‌ನ ಜಿಲ್ಲಾ ಸಂಚಾಲಕ ಪ್ರವೀಣ ಹೌದಿ, ಜಿಲ್ಲಾ ಕಾರ್ಯದರ್ಶಿ ಸಂಗನಗೌಡ ಪಾಟೀಲ ಹಾಗೂ ತಾಲ್ಲೂಕು ಸಂಚಾಲಕ ಪ್ರಶಾಂತ ಹಿರೇಮಠ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.