ಶುಕ್ರವಾರ, ಮೇ 27, 2022
22 °C

ಕೇಂದ್ರದ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ತೋರುತ್ತಿರುವ ಅನ್ಯಾಯ ಧೋರಣೆಯನ್ನು ಖಂಡಿಸಿ ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕವು ಮಂಗಳವಾರ ಪ್ರತಿಭಟನೆ ನಡೆಸಿತು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ತುಬಾಕಿ, “ರಾಜ್ಯ ಎದುರಿಸುತ್ತಿರುವ ವಿದ್ಯುತ್ ಕೊರತೆಗೆ ಕೇಂದ್ರ ಸರ್ಕಾರದ ತಾರತಮ್ಯ ಧೋರಣೆಯೇ ಪ್ರಮುಖ ಕಾರಣ. ಕಾಂಗ್ರೆಸ್ ಮುಖಂಡರು ರಾಜ್ಯದ ಹಿತ ವನ್ನು ಕಾಪಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದನ್ನು ಬಿಟ್ಟು ರಾಜ್ಯ ಸರ್ಕಾರವನ್ನು ಟೀಕಿಸುತ್ತ ರಾಜಕೀಯ ಲಾಭ ಪಡೆಯುತ್ತಿರುವುದು ಖಂಡನೀಯ” ಎಂದು ಹೇಳಿದರು.“ಕಲ್ಲಿದ್ದಲು ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯ, ಮಳೆಯಲ್ಲಿನ ಕೊರತೆ, ಕೇಂದ್ರದಿಂದ ಬರಬೇಕಾದ ರಾಜ್ಯದ ಪಾಲಿನ ವಿದ್ಯುತ್ ಕೊರತೆಗಳಿಂದಾಗಿ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ. ಹೀಗಾಗಿ ಅನಿವಾರ್ಯವಾಗಿ ಲೋಡ್‌ಶೆಡ್ಡಿಂಗ್ ಮಾಡಲಾಗುತ್ತಿದೆ. ಇದರ ಹೊಣೆ ಯನ್ನು ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವೇ ಹೊರಬೇಕು” ಎಂದು ಹೇಳಿದರು.“ಕೇಂದ್ರೀಯ ಸ್ಥಾವರದಿಂದ ಕರ್ನಾ ಟಕದ ಪಾಲನ್ನು ಸಂಪೂರ್ಣವಾಗಿ ಸರಬರಾಜು ಮಾಡಬೇಕು. ಕಲ್ಲಿದ್ದಲಿನ ಕೊರತೆಯನ್ನು ಎದುರಿಸುತ್ತಿರುವ ಹಿನ್ನೆ ಲೆಯಲ್ಲಿ ಮಹಾರಾಷ್ಟ್ರಕ್ಕೆ ಹೆಚ್ಚುವರಿ ಯಾಗಿ ವಿದ್ಯುತ್ ನೀಡಿದ ಮಾದರಿ ಯಲ್ಲೇ ರಾಜ್ಯಕ್ಕೆ 500 ಮೆಗಾವ್ಯಾಟ್ ಹೆಚ್ಚುವರಿಯಾಗಿ ನೀಡಬೇಕು. ರಾಜ್ಯ ಸರ್ಕಾರದ ಹೊಸ ವಿದ್ಯುತ್ ಯೋಜನೆ ಗಳಿಗೆ ಅನುಮತಿ ಹಾಗೂ ಕಲ್ಲಿದ್ದಲು ಸರಬರಾಜು ಮಾಡಲು ಒಪ್ಪಿಗೆ ಸೂಚಿಸ ಬೇಕು. ರಾಜ್ಯದ ಕಾಂಗ್ರೆಸ್ ಮುಖಂ ಡರು, ಕೇಂದ್ರದ ಸಚಿವರು ವಿದ್ಯುತ್ ಸಮಸ್ಯೆ ವಿಷಯದಲ್ಲಿ ರಾಜಕೀಯ ಮಾಡದೇ, ರಾಜ್ಯದ ಹಿತಾಸಕ್ತಿ ಕಾಪಾಡಲು ಮುಂದಾಗಬೇಕು” ಎಂದು ಒತ್ತಾಯಿಸಿದರು.ನಗರದ ಚನ್ನಮ್ಮ ವೃತ್ತದಿಂದ ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಘೋಷಣೆ ಕೂಗುತ್ತ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ ಎಫ್.ಎ. ಫೈಜಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಂ.ಬಿ. ಝಿರಲಿ, ರಾಜೇಂದ್ರ ಹರಕುಣಿ, ರಾಜು ಚಿಕ್ಕನಗೌ ಡರ, ಸಂಜೀವ ಹನುಮಸಾಗರ, ಸಂಜಯ ಬೆಳಗಾಂವಕರ, ಕೇದಾರ ಘಸಾರಿ, ಪ್ರದೀಪ ಶೆಟ್ಟಿ, ಲೀನಾ ಟೋಪಣ್ಣನವರ, ಸರಳಾ ಹಿರೇಕರ, ಉಜ್ವಲಾ, ಸುನಿತಾ ಪಾಟೀಲ, ಸ್ನೇಹಲ್ ಕೋಳೆ, ವೀರೇಶ, ಅನಿಲ್ ಬೆನಕೆ, ಯುವರಾಜ ಕದಮ್, ರಾಹುಲ್ ಮುಚ್ಚಂಡಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.