ಶುಕ್ರವಾರ, ಮೇ 20, 2022
21 °C

ಕೇಂದ್ರದ ವಿರುದ್ಧ ಬಿಜೆಪಿ ಜೈಲ್‌ಭರೋ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಮುಖಿ ಆಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ಹೊಣೆಗೇಡಿ ಆರ್ಥಿಕ ನೀತಿ ಹಾಗೂ ತಪ್ಪು ರಾಜಕೀಯ ನಿರ್ಧಾರಗಳು ಕಾರಣ ಎಂದು ಆರೋಪಿಸಿ ಶುಕ್ರವಾರ ಪ್ರತಿಭಟನೆ ನಡೆಸಿದ ಭಾರತೀಯ ಜನತಾ ಪಕ್ಷದ 180ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.ನಗರದ ಗಾಂಧಿ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮಾನವ ಸರಪಳಿ ರಚಿಸಿದ್ದರಿಂದ, ಕೆಲಕಾಲ ಸಂಚಾರಕ್ಕೆ ತೊಂದರೆಯಾಯಿತು. ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು 5 ವ್ಯಾನ್ ಹಾಗೂ ಖಾಸಗಿ ಬಸ್ ಮೂಲಕ ಡಿಎಆರ್ ಮೈದಾನದಲ್ಲಿರುವ ಜಿಲ್ಲಾ ಪೊಲೀಸ್ ಸಮುದಾಯ ಭವನಕ್ಕೆ ಕರೆದೊಯ್ದರು.ಯುಪಿಎ ಸರ್ಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಹೆಚ್ಚುವರಿ ಆಹಾರ ಧಾನ್ಯವನ್ನು ಬಡವರಿಗೆ ಹಂಚಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು ಸರ್ಕಾರ ಜಾರಿಗೊಳಿಸಲಿಲ್ಲ.

ಇದರಿಂದಾಗಿ ಲಕ್ಷಾಂತರ ಮಂದಿ ಅಪೌಷ್ಟಿಕತೆ ಹಾಗೂ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ದೂರಿದರು.`ದೂಡಾ~ ಅಧ್ಯಕ್ಷ ಯಶವಂತರಾವ್ ಜಾದವ್, ಮಾಜಿ ಮೇಯರ್‌ಗಳಾದ ಎಂ.ಎಸ್. ವಿಠ್ಠಲ್, ಎಚ್.ಎನ್. ಗುರುನಾಥ್, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಪ್ರತಿಭಾ ಮಲ್ಲಿಕಾರ್ಜುನ್, ಎಚ್.ಎಂ. ರುದ್ರಮುನಿಸ್ವಾಮಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.