ಭಾನುವಾರ, ಏಪ್ರಿಲ್ 18, 2021
31 °C

ಕೇಂದ್ರೀಯ ವಿದ್ಯಾಲಯ: ಅಧಿಕಾರಿಗಳ ತಂಡ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಸಂಬಂಧ ಅಂತಿಮ ಪರಿಶೀಲನೆಗಾಗಿ ಕೇಂದ್ರೀಯ ವಿದ್ಯಾಲಯ ಅಧಿಕಾರಿಗಳ ತಂಡ ಶುಕ್ರವಾರ ನಗರಕ್ಕೆ ಭೇಟಿ ನೀಡಿ ತಾತ್ಕಾಲಿಕ ಕಟ್ಟಡವನ್ನು ಪರಿಶೀಲಿಸಿತು.ಕೇಂದ್ರೀಯ ವಿದ್ಯಾಲಯದ ಉಪ ಆಯುಕ್ತ ಇಸಾಂ ಪಾಲ್ ನಗರದ ರೇಷ್ಮೆ ಮಾರುಕಟ್ಟೆ ಆವರಣದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ವಿದ್ಯಾಲಯದ ಕಟ್ಟಡವನ್ನು ಪರಿಶೀಲಿಸಿದರು.ಈಗಾಗಲೇ, ತಾಲ್ಲೂಕಿನ ಕಿರಗಸೂರು ಗ್ರಾಮದಲ್ಲಿ 6.15 ಎಕರೆ ಜಮೀನನ್ನು ವಿದ್ಯಾಲಯದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿದೆ. ವಿದ್ಯಾಲಯಕ್ಕೆ ಕನಿಷ್ಠ 10 ಎಕರೆಯಷ್ಟು ಜಮೀನಿನ ಅಗತ್ಯವಿದೆ. ಇಷ್ಟು ಪ್ರಮಾಣದ ಭೂಮಿ ಲಭ್ಯವಾದರೆ ವಿದ್ಯಾಲಯದ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.ಪ್ರಸ್ತುತ ವಿದ್ಯಾಲಯ ಆರಂಭಕ್ಕೆ ಕೈಗೊಂಡಿರುವ ಸಿದ್ಧತೆ ಬಗ್ಗೆ ಇಸಾಂ ಪಾಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸದ ಆರ್. ಧ್ರುವನಾರಾಯಣ, ಶಾಸಕ ಸಿ. ಪುಟ್ಟರಂಗಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬೆಳ್ಳಶೆಟ್ಟಿ, ಮೈಸೂರಿನ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.