ಸೋಮವಾರ, ಮೇ 10, 2021
25 °C

ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಿಲ್ಲಾ ಕೇಂದ್ರದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸಲು ಸಿದ್ಧತೆಕೈಗೊಳ್ಳಲಾಗಿದ್ದು, ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದ ನವೀಕರಣ ಕಾಮಗಾರಿಯೂ ನಡೆಯುತ್ತಿದೆ~ ಎಂದು ಸಂಸದ ಆರ್. ಧ್ರುವನಾರಾಯಣ ತಿಳಿಸಿದರು.`ಸ್ವಂತ ಕಟ್ಟಡ ನಿರ್ಮಾಣವಾಗುವವರೆಗೂ ತಾತ್ಕಾಲಿಕವಾಗಿ ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ತರಗತಿ ಆರಂಭಿಸಲಾಗುವುದು. ಈಚೆಗೆ ಭೇಟಿ ನೀಡಿದ್ದ ಕೇಂದ್ರ ತಂಡ ಕೂಡ ಅನುಮತಿ ನೀಡಿದೆ. ಸಂಸದರ ನಿಧಿಯಿಂದ 20 ಲಕ್ಷ ರೂ ಹಾಗೂ ಶಾಸಕರ ನಿಧಿಯಿಂದ 13 ಲಕ್ಷ ರೂ ಸೇರಿದಂತೆ ಒಟ್ಟು 33 ಲಕ್ಷ ರೂ ವೆಚ್ಚದಡಿ ಕಟ್ಟಡದ ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ~ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.ಬೆಂಗಳೂರು- ಕನಕಪುರ- ಚಾಮರಾಜನಗರ ರೈಲ್ವೆ ಮಾರ್ಗ ಆಗುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ. ಹಿಂದಿನ ರೈಲ್ವೆ ಬಜೆಟ್‌ನಲ್ಲಿಯೇ ಈ ಮಾರ್ಗಕ್ಕೆ ಒಪ್ಪಿಗೆ ಸಿಕ್ಕಿದೆ. ಮಾರ್ಗದ ಗಡಿಕಲ್ಲು ನಿಗದಿಗೆ ಟೆಂಡರ್ ಕೂಡ ಕರೆಯಲಾಗಿದೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಕೂಡ ರಾಜ್ಯದ ಪಾಲಿನ ಅನುದಾನ ನೀಡಲು ಒಪ್ಪಿದ್ದಾರೆ ಎಂದರು.ರಾಷ್ಟ್ರೀಯ ಹೆದ್ದಾರಿ-209ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಬೆಂಗಳೂರಿನಿಂದ ದಿಂಡಿಗಲ್‌ಗೆ ಸಂಪರ್ಕ ಕಲ್ಪಿಸುವ ಈ ಹೆದ್ದಾರಿ ರಾಜ್ಯದಲ್ಲಿ 186 ಕಿ.ಮೀ. ಹಾದುಹೋಗಿದೆ. ಇದರ ಅಭಿವೃದ್ಧಿಗೆ 700 ಕೋಟಿ ರೂ ಮಂಜೂರಾಗಿದೆ.ಜಿಲ್ಲೆಯಲ್ಲಿ ಪ್ರವಾಸಿ ತಾಣ ಹೆಚ್ಚಿವೆ. ಹೊಗೇನಕಲ್, ಗಗನಚುಕ್ಕಿ, ಭರಚುಕ್ಕಿ ಸೇರಿದಂತೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.