ಬೆಂಗಳೂರು: ರಾಜ್ಯದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೇಂದ್ರದ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ಹಿಂದಿ, ಇಂಗ್ಲಿಷ್ ಜೊತೆಗೆ ಆಯಾ ಪ್ರಾದೇಶಿಕ ಭಾಷೆಗಳನ್ನೂ ಕೇಂದ್ರೀಯ ವಿದ್ಯಾಲಯಗಳಲ್ಲಿ ಕಲಿಸಬೇಕು.

ರಾಜ್ಯದಲ್ಲಿರುವ 36 ಕೇಂದ್ರೀಯ ವಿದ್ಯಾಲಯಗಳಲ್ಲಿ ಸುಮಾರು 18 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ ಶೇ 80ರಷ್ಟು ಮಕ್ಕಳು ಕನ್ನಡಿಗರಾಗಿದ್ದು, ಅವರ ಮಾತೃ ಭಾಷೆ ಕನ್ನಡವಾಗಿದೆ.

ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.