ಕೇಂದ್ರೀಯ ವಿವಿ ನೇಮಕಾತಿ ತಡೆಗೆ ಆಗ್ರಹ

7

ಕೇಂದ್ರೀಯ ವಿವಿ ನೇಮಕಾತಿ ತಡೆಗೆ ಆಗ್ರಹ

Published:
Updated:

ಬೀದರ್: ಗುಲ್ಬರ್ಗ ಕೇಂದ್ರೀಯ ವಿಶ್ವ­ವಿದ್ಯಾಲಯದಲ್ಲಿ ನಡೆಯುತ್ತಿರುವ ಬೋಧಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದ ಬಳಿ ಸೇರಿದ ಕಾರ್ಯಕರ್ತರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.ಸಂವಿಧಾನದ 371(ಜೆ) ಕಲಂ ತಿದ್ದುಪಡಿ ಕಾಯ್ದೆ ಆಧಾರದಲ್ಲಿಯೇ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾನವ ಸಂಪನ್ಮೂಲ ಸಚಿವರಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.ನೇಮಕಾತಿ ಪ್ರಕ್ರಿಯೆ ತಡೆಹಿಡಿಯದಿದ್ದರೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ್‌ಕುಮಾರ್ ಹೊಕ್ರಾಣೆ, ಜಿಲ್ಲಾ ಅಧ್ಯಕ್ಷ ಶಶಿಧರ ಹೊಸಳ್ಳಿ, ಪ್ರಧಾನ ಕಾರ್ಯದರ್ಶಿ ಮಹೇಶ್ವರ್ ಸ್ವಾಮಿ ಪ್ರತಿಭಟನೆಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry