ಗುರುವಾರ , ಏಪ್ರಿಲ್ 22, 2021
28 °C

ಕೇಂದ್ರೀಯ ವಿಶ್ವವಿದ್ಯಾಲಯ: ಮೀಸಲು ಹುದ್ದೆಗಳು ಖಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): `ಶಿಕ್ಷಣ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪ್ರಾತಿನಿಧ್ಯ ನೀಡಲು ಸರ್ಕಾರದ  ಪ್ರಯತ್ನದ ಹೊರತಾಗಿಯೂ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಅವರಿಗೆ  ಮೀಸಲಿಟ್ಟಿರುವ ಶಿಕ್ಷಕರ ಹುದ್ದೆಗಳು ಖಾಲಿಯಾಗಿವೆ~ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, 40 ವಿಶ್ವವಿದ್ಯಾಲಯಗಳಲ್ಲಿರುವ ಪರಿಶಿಷ್ಟ ಜಾತಿಗಾಗಿನ ಒಟ್ಟು 2,521 ಹುದ್ದೆಗಳಲ್ಲಿ 742 ಹುದ್ದೆಗಳು (ಶೇ 29) ಹಾಗೂ ಪರಿಶಿಷ್ಟ ಪಂಗಡದಲ್ಲಿನ 1,265 ಹುದ್ದೆಗಳಲ್ಲಿ 331 ಹುದ್ದೆಗಳು ಮಾತ್ರ  (ಶೇ 26) ಭರ್ತಿಯಾಗಿವೆ.ದೆಹಲಿ ವಿಶ್ವವಿದ್ಯಾಲಯವೊಂದನ್ನೇ ಉದಾಹರಣೆಯಾಗಿ ತೆಗೆದುಕೊಂಡಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕಾಗಿ ಒಟ್ಟು ಮೀಸಲಿಟ್ಟಿರುವ 109 ಹಾಗೂ 62 ಹುದ್ದೆಗಳಲ್ಲಿ ಕೇವಲ 24 ಮತ್ತು 46 ಹುದ್ದೆಗಳು ಮಾತ್ರ ಭರ್ತಿಯಾಗಿವೆ.ಅದರಂತೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯಗಳ ಪರಿಸ್ಥಿತಿಯೂ ಇದೇ ರೀತಿ ಇದೆ ಎಂದೂ ಅಂಕಿಅಂಶಗಳು ತಿಳಿಸಿವೆ.ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಕೇರಳ, ಒರಿಸ್ಸಾ, ಪಂಜಾಬ್, ರಾಜಸ್ತಾನ ಮತ್ತು ತಮಿಳುನಾಡು ವಿಶ್ವವಿದ್ಯಾಲಯಗಳಲ್ಲಿ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ ಎನ್ನಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.