ಬುಧವಾರ, ಜೂನ್ 23, 2021
28 °C

ಕೇಂದ್ರ, ಆಯೋಗಕ್ಕೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಅನರ್ಹರೆಂದು ಘೋಷಿಸ­ಬೇಕು ಎಂದು ವಿನಂತಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.



ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸದಂತೆ ಅಭ್ಯರ್ಥಿಗಳಿಗೆ ನಿರ್ದೇಶನ ನೀಡಬೇಕು ಎಂದೂ ವಿನಂತಿಸಿಕೊಂಡಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ನೇತೃತ್ವದ ಪೀಠವು ವಿಚಾರಣೆಗೆ ಕೈಗೆತ್ತಿಕೊಂಡಿತು.



ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬೇರೆ ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿಲ್ಲ ಎಂಬ ಪ್ರಮಾಣಪತ್ರವನ್ನು ಅಭ್ಯರ್ಥಿಗಳಿಂದ ಪಡೆದುಕೊಳ್ಳುವಂತೆ ಮತ್ತು ಆ ನಂತರ ಅವರು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ನಾಮಪತ್ರವನ್ನೇ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಬೇಕು ಎಂದು ವಕೀಲ ಎಚ್‌.ಕೆ. ನಾಯ್ಕ್‌ ಅವರು ಅರ್ಜಿ ಸಲ್ಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.