ಕೇಂದ್ರ ಮಾಜಿ ಸಚಿವ ಅರುಣ್ ನೆಹರೂ ಇನ್ನಿಲ್ಲ

ನವದೆಹಲಿ (ಪಿಟಿಐ): ಕೇಂದ್ರದ ಮಾಜಿ ಸಚಿವ ಅರುಣ್ ನೆಹರೂ(69) ಗುರುವಾರ ರಾತ್ರಿ ನಿಧನರಾದರು.
ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುಡಗಾಂವ್ನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದರು. ಅವರ ಅಂತ್ಯಸಂಸ್ಕಾರ ಶುಕ್ರವಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಸಂಬಂಧಿಯಾಗಿದ್ದ ಅರುಣ್ ನೆಹರೂ, ಅವರ ಸಂಪುಟದಲ್ಲಿ ಆಂತರಿಕ ಭದ್ರತಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮೂರು ಅವಧಿಗೆ ಲೋಕಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.