ಭಾನುವಾರ, ಮೇ 16, 2021
28 °C

ಕೇಂದ್ರ ಮಾಜಿ ಸಚಿವ ರಾಮದಾಸ್ ವಿರುದ್ಧ ಸಿಬಿಐ ಆರೋಪಪಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನಿಗದಿತ ಸಂಖ್ಯೆಯ ಬೋಧಕ ಸಿಬ್ಬಂದಿ ಹಾಗೂ ಚಿಕಿತ್ಸಾ ಪರಿಕರಗಳು ಇಲ್ಲದಿದ್ದರೂ ಇಂದೋರ್‌ನ ವೈದ್ಯಕೀಯ ಕಾಲೇಜೊಂದಕ್ಕೆ, ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಮತಿ ನೀಡಿದ್ದ ಪ್ರಕರಣದಲ್ಲಿ ಕೇಂದ್ರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಅವರ ವಿರುದ್ಧ ಸಿಬಿಐ ಗುರುವಾರ ಆರೋಪಪಟ್ಟಿ ಸಲ್ಲಿಸಿದೆ.

ಸಿಬಿಐ ದೆಹಲಿ ನ್ಯಾಯಾಲಯವೊಂದಕ್ಕೆ 36 ಪುಟಗಳ ಆರೋಪಪಟ್ಟಿ ನೀಡಿದೆ. ರಾಮದಾಸ್ ಹಾಗೂ ಇತರ 9 ಜನರನ್ನು ಆರೋಪಿಗಳನ್ನಾಗಿ ಹೆಸರಿಸಿದೆ. ಇವರಲ್ಲಿ ಇಬ್ಬರು ಹಿರಿಯ ಸರ್ಕಾರಿ ಅಧಿಕಾರಿಗಳು. ಇಬ್ಬರು ಇಲ್ಲಿನ ಸಫ್ದರ್‌ಜಂಗ್ ಆಸ್ಪತ್ರೆಯ, ಉಳಿದ 5 ಇಂದೋರ್‌ನ ಖಾಸಗಿ ಆಸ್ಪತ್ರೆಯ ವೈದ್ಯರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.