ಸೋಮವಾರ, ಜನವರಿ 27, 2020
25 °C

ಕೇಂದ್ರ ಸಚಿವೆ ಜಯಂತಿ ನಟರಾಜನ್ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ) : ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವೆ ಜಯಂತಿ ನಟರಾಜನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.

ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷಸಂಘಟನೆ ನಡೆಸುವ ಸಲುವಾಗಿ ಅವರು ರಾಜೀನಾಮೆ ನೀಡಿದ್ದು, ಇನ್ನೂ ಹಲವು ಸಚಿವರು ರಾಜೀನಾಮೆ ನೀಡುವ ಸಾಧ್ಯತೆಯನ್ನು ಮೂಲಗಳು ವ್ಯಕ್ತಪಡಿಸಿವೆ.

ತಮಿಳುನಾಡು ಮೂಲದ ಜಯಂತಿ ಅವರು ಮೂರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 59 ವರ್ಷದ ಅವರು ರಾಜ್ಯಸಭೆಯ ಹಿರಿಯ ಸದಸ್ಯೆಯಾಗಿದ್ದರು.

ಮೂಲಗಳ ಪ್ರಕಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಲವು ಕಾರ್ಯದರ್ಶಿಗಳನ್ನು ಪಕ್ಷದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಲ್ಲದೆ ಕೇಂದ್ರ ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪರಿಸರ ಖಾತೆಯ ಹೆಚ್ಚುವರಿ ಜವಾಬ್ದಾರಿ ನೀಡುವ ನಿರೀಕ್ಷೆ ಮಾಡಲಾಗಿದೆ.

ಮೂಲಗಳ ಪ್ರಕಾರ ರಾಜೀನಾಮೆ ನೀಡುವ ಸಚಿವರ ಪಟ್ಟಿಯಲ್ಲಿ ಜೈರಾಮ್ ರಮೇಶ್, ಸಚಿನ್ ಪೈಲೆಟ್ ಮತ್ತು ಜಿತೇಂದ್ರ ಸಿಂಗ್ ಭನ್ವಾರ್ ಅವರ ಹೆಸರುಗಳಿವೆ.

ಪ್ರಧಾನ ಮಂತ್ರಿ ಅಭ್ಯರ್ಥಿ ಘೋಷಣೆಗಾಗಿ ಜನವರಿ 17ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೂ ಮುನ್ನ ಪಕ್ಷದಲ್ಲಿ ಸಾಕಷ್ಟು ಬದಲಾವಣೆ ನಡೆಯುವ ನಿರೀಕ್ಷೆ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)