ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಭರವಸೆ

7

ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಭರವಸೆ

Published:
Updated:

ರಾಯಚೂರು: ರಾಯಚೂರಿನಲ್ಲಿಯೇ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಇಲ್ಲಿನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮಂಜೂರಾತಿ ಹೋರಾಟ ಸಮಿತಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಮನವಿ ಸಲ್ಲಿಸಿತು.ಇಲ್ಲಿಂದ ನಿಯೋಗದಲ್ಲಿ ತೆರಳಿದ್ದ ಸಮಿತಿ ಪದಾಧಿಕಾರಿಗಳು, ಸದಸ್ಯರು, ರಾಯಚೂರಿನಲ್ಲಿ ಐಐಟಿ ಸ್ಥಾಪನೆಗೆ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಮಂಜೂರಾತಿ ಮಾಡಲು ಒತ್ತಡ ಆಗುತ್ತದೆ. ಕೂಡಲೇ ಸ್ಪಂದಿಸಬೇಕು ಎಂದು ಮನವಿ ಮಾಡಿದರು.ಮನವಿ ಸ್ವೀಕರಿಸಿದ ಮುಖ್ಯಮಂತ್ರಿ, ಡಾ.ಡಿ.ಎಂ.ನಂಜುಂಡಪ್ಪ ವರದಿ ಶಿಫಾರಸ್ಸು ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ರಾಯಚೂರಿನಲ್ಲಿಯೇ ಐಐಟಿ ಸ್ಥಾಪನೆ ಮಾಡಲು ಶೀಘ್ರದಲ್ಲಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಸಮಿತಿ ಅಧ್ಯಕ್ಷ ಬಸವರಾಜ ಕಳಸ ತಿಳಿಸಿದ್ದಾರೆ.ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್.ಶಂಕರಪ್ಪ, ಶಾಸಕರಾದ ಸಯ್ಯದ್ ಯಾಸಿನ್, ಶಿವನಗೌಡ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಎನ್.ಆರ್.ಮಠದ, ರಾಯಚೂರು ವಿಕಾಸ ಪರಿಷತ್ ಅಧ್ಯಕ್ಷ ರವೀಂದ್ರ ಜಾಲ್ದಾರ್, ಹೈ.ಕ.ವಿಮೋಚನಾ ವೇದಿಕೆ ಅಂಬಣ್ಣ ಅರೋಲಿ, ಕರವೇ ಅಧ್ಯಕ್ಷ ಅಶೋಕ ಜೈನ್, ಡಾ.ರಾಜಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ನರಸಿಂಹಲು ಮೈತ್ರಿಕರ್, ಪಿ.ಅಮರೇಶ, ರಾಜು ಪಟ್ಟಿ ಹಾಗೂ ಇತರರು ನಿಯೋಗದಲ್ಲಿದ್ದರು ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry