ನೆಲಮಂಗಲ: ಕಾಂಗ್ರೆಸ್ ನೇತೃತ್ವದ ಕೇಂದ್ರದ ಯುಪಿಎ ಸರ್ಕಾರದ ಜನ ವಿರೋಧಿ ಆರ್ಥಿಕ ನೀತಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸ್ಥಳೀಯ ಬಿಜೆಪಿ ಘಟಕ ಪ್ರತಿಭಟನಾ ರ್ಯಾಲಿ ನಡೆಸಿತು.

ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ನಂತರ ತಾಲ್ಲೂಕು ಕಚೇರಿ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ವಿ.ನಾಗರಾಜು, ಕೇಂದ್ರದಲ್ಲಿ ಯುಪಿಎ ಅಧಿಕಾರಕ್ಕೆ ಬಂದಾಗಿನಿಂದಲೂಪೆಟ್ರೋಲ್, ಡೀಸೆಲ್ ಹಾಗು ಗೃಹ ಬಳಕೆ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿ ಬಡವರ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ದೂರಿದರು.

ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸುನೀಲ್ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಳೆಕಾಯಿ ನಾಗರಾಜು, ತಾಲ್ಲೂಕು ಅಧ್ಯಕ್ಷ ಸುಬ್ಬರಾಯಪ್ಪ, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್.ಮಲ್ಲಯ್ಯ, ಕೆ.ಪಿ. ಆನಂದ್, ಮಹದೇವ್, ಗುಬ್ಬಣ್ಣಸ್ವಾಮಿ, ಸತೀಶ್, ರಾಮಸ್ವಾಮಿ, ಸೌಮ್ಯ, ರಾಜಮ್ಮ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.