ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ

7

ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ

Published:
Updated:

ನವದೆಹಲಿ (ಪಿಟಿಐ): ಮುಂಬರುವ ಚುನಾವಣೆಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರವು ತನ್ನ ನೌಕರರನ್ನು ಓಲೈಸುವ ನಿಟ್ಟಿನಲ್ಲಿ ಬುಧವಾರ ಏಳನೇ ವೇತನ ಆಯೋಗವನ್ನು ರಚನೆ ಮಾಡಿದ್ದು, ಇದರ ಪ್ರಯೋಜನವನ್ನು ಸುಮಾರು 80 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪಡೆಯಲಿದ್ದಾರೆ.`ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಏಳನೇ ವೇತನ ಆಯೋಗ ರಚಿಸಲು ಅನುಮತಿಸಿದ್ದು, ಇದರ ಶಿಫಾರಸುಗಳು ಜನವರಿ 1, 2016 ರಿಂದ ಜಾರಿಗೊಳ್ಳುವ ಸಾಧ್ಯತೆ ಇದೆ' ಎಂದು ಹಣಕಾಸು ಸಚಿವ ಪಿ.ಚಿದಂಬರಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮುಂಬರುವ ನವೆಂಬರ್‌ನಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ಹಾಗೂ ಮುಂದಿನ ವರ್ಷದಲ್ಲಿ ಲೋಕಸಭೆ ಚುನಾವಣೆ ನಡೆಯಲಿವೆ. ಇದನ್ನು ಗಮನದಲ್ಲಿಟ್ಟುಕೊಂಡು ರಚಿಸಲಾದ ಈ ವೇತನ ಆಯೋಗದ ಲಾಭವು ರಕ್ಷಣಾ ಇಲಾಖೆ ಮತ್ತು ರೈಲ್ವೆ ಸೇರಿದಂತೆ ಕೇಂದ್ರ ಸರ್ಕಾರದ 50 ಲಕ್ಷಕ್ಕೂ ಅಧಿಕ ನೌಕರರಿಗೂ ಹಾಗೂ 30ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೂ ದೊರೆಯಲಿದೆ.ಏಳನೇ ವೇತನ ಆಯೋಗದ ಅಧ್ಯಕ್ಷರನ್ನು ಹಾಗೂ ಸದಸ್ಯರನ್ನು ಹೆಸರುಗಳನ್ನು ಶೀಘ್ರದಲ್ಲಿಯೇ ಅಂತಿಮಗೊಳಿಸಲಾಗುವುದು ಎಂದು ಚಿದಂಬರಂ ಹೇಳಿದರು.

ತನ್ನ ನೌಕರರ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಿಸುವ ವೇತನ ಆಯೋಗವನ್ನು ಕೇಂದ್ರ ಸರ್ಕಾರವು ಪ್ರತಿ ಹತ್ತು ವರ್ಷಕ್ಕೊಮ್ಮೆ ರಚಿಸುತ್ತದೆ. ಅದು ಜಾರಿಗೆ ಬಂದ ನಂತರ ರಾಜ್ಯಗಳನ್ನು ಅದರ ಶಿಫಾರಸುಗಳನ್ನು ಕೆಲ ತಿದ್ದುಪಡಿಗಳನ್ನು ಮಾಡಿಕೊಂಡು ಜಾರಿಗೊಳಿಸುತ್ತವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry