ಚಳ್ಳಕೆರೆ: ಯೋಗ ಗುರು ಬಾಬಾ ರಾಮ್ದೇವ್ ಮತ್ತು ಅವರ ಅಪಾರ ಶಿಷ್ಯವೃಂದವನ್ನು ನವದೆಹಲಿಯ ರಾಮಲೀಲಾ ಮೈದಾನದಿಂದ ಹೊರಹಾಕಿದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಘಟನಾ ಸಂಚಾಲಕ ಬಾಳಪ್ಪ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಟ್ಟಣದಲ್ಲಿ ಬುಧವಾರ ಎಬಿವಿಪಿ ರಾಮ್ದೇವ್ ಅವರಿಗೆ ಬೆಂಬಲಿಸಿ, ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಹೊರಟು ನೆಹರು ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಂತರ, ತಾಲ್ಲೂಕು ಕಚೇರಿಗೆ ಆಗಮಿಸಿ ಶಿರಸ್ತೇದಾರ್ ತಿಪ್ಪುರಾವ್ ಅವರಿಗೆ ಮನವಿ ಸಲ್ಲಿಸಿ, ಪ್ರಧಾನಿ ಮನಮೋಹನ್ ಸಿಂಗ್ ಪ್ರತಿಕೃತಿ ದಹಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ತಾಲ್ಲೂಕು ಸಂಚಾಲಕ ಮಂಜುನಾಥ್, ಗೋಪನಹಳ್ಳಿ ತಿಪ್ಪೇಸ್ವಾಮಿ ಗಂಗಾಧರಯ್ಯ, ವಿಶ್ವನಾಥ್, ಕುಬೇರ ಇನ್ನಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.