ಬೆಂಗಳೂರು: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಭಾನುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಮಾವೇಶದಲ್ಲಿ ಕೇಜ್ರಿವಾಲ್ ಅವರು ನರೇಂದ್ರ ಮೋದಿ ಬಗ್ಗೆ ಸುಳ್ಳು ಮತ್ತು ವ್ಯಕ್ತಿತ್ವ ತೇಜೋವಧೆ ಮಾಡುವ ಹೇಳಿಕೆಗಳನ್ನು ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದೆ.

ಶಾಸಕ ಸುರೇಶ್ ಕುಮಾರ್, ಪಕ್ಷದ ವಕ್ತಾರರಾದ ಮಾಳವಿಕಾ ಅವಿನಾಶ್ ಅವರು ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರಿಗೆ ದೂರು ಸಲ್ಲಿಸಿದ್ದಾರೆ.

ಗುಜರಾತ್ನಲ್ಲಿ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಯಾವುದೇ ಸರ್ಕಾರಿ ಕೆಲಸಗಳಿಗೂ ಹಣ ನೀಡಬೇಕು. ಚಾಲಕರ ಪರವಾನಗಿ ನೀಡಲು ₨ 5 ಸಾವಿರ ನೀಡಬೇಕು ಮತ್ತು ಡಿವೈಎಸ್ಪಿ ವರ್ಗಾವಣೆಗೆ ₨2.75 ಕೋಟಿ ನೀಡಬೇಕು. ಒಂದು ವೇಳೆ ನರೇಂದ್ರ ಮೋದಿ ಪ್ರಧಾನಿಯಾದರೆ ಪ್ರತಿಯೊಂದು ಕೆಲಸಕ್ಕೂ ದರ ನಿಗದಿಪಡಿಸುತ್ತಾರೆ ಎಂದು ಕೇಜ್ರಿವಾಲ್ ಆರೋಪ ಮಾಡಿದ್ದಾರೆ. ಆದರೆ, ಈ ಆರೋಪಕ್ಕೆ ಅವರ ಬಳಿ ಯಾವುದೇ ಸಾಕ್ಷಿಗಳಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದೇ ರೀತಿ ಯಾವುದೇ ದಾಖಲೆಗಳಿಲ್ಲದೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಡಿ.ವಿ. ಸದಾನಂದಗೌಡ ಸೇರಿದಂತೆ ಪಕ್ಷದ ಇತರ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಕೇವಲ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಕಾನೂನಿನ ಪ್ರಕಾರ ಅಪರಾಧ. ಇಂತಹ ವ್ಯಕ್ತಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.