ಮಡಿಕೇರಿ:  ನೆರೆಯ ಕೇರಳ ರಾಜ್ಯದಲ್ಲಿ ಚುನಾವಣಾ ದೂಳು ಎಬ್ಬಿಸಿರುವ ಕಸ್ತೂರಿ ರಂಗನ್ ವರದಿಯು ಕೊಡಗಿನಲ್ಲೂ ಲೋಕಸಭಾ ಚುನಾವಣಾ ವಿಷಯವಾಗಿ ರೂಪುಗೊಂಡಿದೆ. ವರದಿಯ ಅನುಷ್ಠಾನವನ್ನು ವಿರೋಧಿಸಿ ಬಿಜೆಪಿ, ಜೆಡಿಎಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು ಕೇಂದ್ರ ಹಾಗೂ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ.

ಇದಕ್ಕೆ ಪೂರಕವೆನ್ನುವಂತೆ ಕೇರಳದಲ್ಲಿ ಕಸ್ತೂರಿ ರಂಗನ್ ಸಮಿತಿಯು ಗುರುತಿಸಿದ್ದ ಪರಿಸರ ಸೂಕ್ಷ್ಮ ವಲಯದಿಂದ (ಪಶ್ಚಿಮಘಟ್ಟದ ಸುತ್ತಮುತ್ತಲಿನ ಪ್ರದೇಶ) ಜನವಸತಿ ಪ್ರದೇಶವನ್ನು ಹೊರತುಪಡಿಸಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವುದು ಜಿಲ್ಲೆಯ ಮುಖಂಡರನ್ನು ಕೆರಳಿಸಿದೆ. ರಾಜ್ಯದಲ್ಲಿ ಗುರುತಿಸಲಾಗಿರುವ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಯಿಂದ ಜನವಸತಿ ಪ್ರದೇಶವನ್ನು ಕೇರಳದ ಮಾದರಿಯಂತೆ ಹೊರಗಿಡಲು ಕೇಂದ್ರ ಹಾಗೂ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಕೇರಳ ರಾಜ್ಯದಲ್ಲಿ ಅರಣ್ಯ ಸೇರಿದಂತೆ ಸುತ್ತಮುತ್ತಲಿನ 13,108 ಚ.ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ-ವೆಂದು (ಈ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದಂತೆ ಶಿಫಾರಸ್ಸು ಮಾಡಲಾಗಿದೆ) ಸಮಿತಿಯು ಗುರುತಿಸಿತ್ತು. ಇದರಲ್ಲಿ ಸುಮಾರು 886.7 ಚ.ಕಿ.ಮೀ. ಪ್ರದೇಶದಲ್ಲಿ ಕೃಷಿ ಭೂಮಿ, ತೋಟ ಹಾಗೂ ಜನವಸತಿ ಇರುವುದರಿಂದ ಈ ಪ್ರದೇಶವನ್ನು ಸೂಕ್ಷ್ಮ ವಲಯ ವ್ಯಾಪ್ತಿಯಿಂದ ಹೊರಗಿಡಬೇಕೆಂದು ಕೇರಳದ ಕಾಂಗ್ರೆಸ್ ಸರ್ಕಾರ ಮನವಿ ಮಾಡಿತ್ತು. ಇದಕ್ಕೆ ಕೇಂದ್ರ ಒಪ್ಪಿಗೆ ಸೂಚಿಸಿದೆ. ಇದೇ ರೀತಿಯ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಏಕೆ ಮಾಡಲಿಲ್ಲ ಎಂದು ವಿರೋಧ ಪಕ್ಷದ ಮುಖಂಡರು ಪ್ರಶ್ನಿಸುತ್ತಿದ್ದಾರೆ.

ಕೊಡಗಿನ 55 ಗ್ರಾಮಗಳು ಸೇರಿದಂತೆ ರಾಜ್ಯದಲ್ಲಿ ಸುಮಾರು 1,500 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಡಿ ಸಮಿತಿಯು ಗುರುತಿಸಿದೆ. ಸಮಿತಿಯ ಶಿಫಾರಸ್ಸುಗಳಲ್ಲಿ ಒಂದಾಗಿರುವ ಏಕರೂಪ ಕೃಷಿ ಮೇಲಿನ ನಿರ್ಬಂಧ ಹಾಗೂ ಕೃಷಿಯಲ್ಲಿ ರಾಸಾಯನಿಕ ಬಳಕೆಗೆ ತಡೆ ಹೇರಿದರೆ ಈ ಪ್ರದೇಶದಲ್ಲಿ ವಾಸಿಸುವ ಜನರ ಜೀವನ ಅಸ್ತವ್ಯಸ್ತಗೊಳ್ಳಲಿದೆ. ಇದನ್ನು ತಡೆಯಲು ಕಾಂಗ್ರೆಸ್ ಸರ್ಕಾರ ಏಕೆ ಪ್ರಯತ್ನಿಸಲಿಲ್ಲವೆಂದು ಬಿಜೆಪಿ ಮುಖಂಡರು ಸಾರ್ವಜನಿಕವಾಗಿ ಧ್ವನಿ ಎತ್ತಿದ್ದಾರೆ.

ಕಸ್ತೂರಿ ರಂಗನ್ ವರದಿಯನ್ನೇ ಲೋಕಸಭಾ ಚುನಾವಣೆಯ ಪ್ರಮುಖ ವಿಷಯವನ್ನಾಗಿ ಬಿಜೆಪಿ ಪ್ರಸ್ತಾಪಿಸುತ್ತಿದೆ. ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಸಭೆ–ಸಮಾರಂಭಗಳಲ್ಲಿ ಈ ವಿಷಯವನ್ನು ಹರಿಬಿಡಲಾಗುತ್ತಿದೆ. ಕೊಡಗು ಜಿಲ್ಲೆಯು ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಜಿಲ್ಲೆಯಲ್ಲಿ ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿದ್ದು, ಇವೆರಡೂ ಕ್ಷೇತ್ರವನ್ನು ಬಿಜೆಪಿ ಶಾಸಕರು ಪ್ರತಿನಿಧಿಸುತ್ತಿದ್ದಾರೆ.

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿ 16 ಲಕ್ಷ ಮತದಾರರಿದ್ದರೆ, ಇವರಲ್ಲಿ 4.30 ಲಕ್ಷ ಮತದಾರರು ಕೊಡಗಿನವರಿದ್ದಾರೆ. ಇದಲ್ಲದೇ, ಮೈಸೂರಿನಲ್ಲೂ ಅಪಾರ ಸಂಖ್ಯೆಯಲ್ಲಿ ಕೊಡಗಿನ ಮೂಲದವರಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿಯ ವಿಷಯವನ್ನು ಭಾವನಾತ್ಮಕವಾಗಿ ನೋಡುತ್ತಿರುವ ಕೊಡಗಿನ ಜನತೆ ಚುನಾವಣೆಯಲ್ಲಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

‘ವರದಿ ಜಾರಿಗೆ ಬಿಜೆಪಿ ವಿರೋಧ’
ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ನೆಲೆಸಿರುವ ಜನರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೆವು. ಅಲ್ಲದೇ, ಕೊಡಗು ಜಿಲ್ಲಾ ಬಂದ್ಗೆ ಕರೆ ಕೂಡ ನೀಡಿದ್ದೆವು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳೀಯರ ಅಭಿಪ್ರಾಯ ಪಡೆಯದೇ ವರದಿ ಅನುಷ್ಠಾನಗೊಳಿಸಲ್ಲ ಎಂದು ಭರವಸೆ ನೀಡಿದ್ದರು.

ಅವರ ಭರವಸೆಯಂತೆ ಬಂದ್ ಕರೆಯನ್ನು ಹಿಂದಕ್ಕೆ ಪಡೆದಿದ್ದೆವು. ಆದರೆ, ಇದುವರೆಗೆ ರಾಜ್ಯ ಸರ್ಕಾರ ವರದಿಯನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ. ಕೇರಳದಲ್ಲಿರುವ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಏಕೆ ಕೈಗೊಳ್ಳುತ್ತಿಲ್ಲ?
– ಅಡ್ಡಂಡ ಕಾರ್ಯಪ್ಪ, ಬಿಜೆಪಿ ಜಿಲ್ಲಾ ವಕ್ತಾರ

‘ಮಲೆನಾಡಿನ ಜನರಿಗೆ ಆತಂಕ’
ವರದಿ ಅನುಷ್ಠಾನದಿಂದ ಜನರಿಗಾಗುವ ತೊಂದರೆಗಳನ್ನು ಕೇಂದ್ರ ಸರ್ಕಾರಕ್ಕೆ ತಿಳಿಹೇಳುವಲ್ಲಿ ಜಿಲ್ಲೆಯ ಬಿಜೆಪಿ ಹಾಗೂ ಕಾಂಗ್ರೆಸ್ಸಿನ ಜನಪ್ರತಿನಿಧಿಗಳು, ಸಂಸದರು ವಿಫಲರಾಗಿದ್ದಾರೆ. ರಾಜ್ಯ ಸರ್ಕಾರ ಕೂಡ ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಮಲೆನಾಡಿನ ಜನರನ್ನು ಆತಂಕಕ್ಕೀಡು ಮಾಡಿದೆ.
– ವಿ.ಪಿ. ಶಶಿಧರ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ

ಕೇರಳ ಕ್ರಮ ಅನುಕರಣೆ – ಕಾಂಗ್ರೆಸ್
ಪರಿಸರ ಸೂಕ್ಷ್ಮ ವಲಯದಿಂದ ಜನವಸತಿ ಪ್ರದೇಶವನ್ನು ಹೊರಗಿಡಲು ಕೇರಳ ಸರ್ಕಾರ ಕೈಗೊಂಡಿರುವ ಕ್ರಮವನ್ನು ರಾಜ್ಯ ಸರ್ಕಾರ ಕೂಡ ಅನುಸರಿಸಲಿದೆ.
–ಬಿ.ಎಸ್. ತಮ್ಮಯ್ಯ, ಕಾಂಗ್ರೆಸ್ ಜಿಲ್ಲಾ ವಕ್ತಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.