ಕೇರಳ ಕೊಂಕಣಿ ಅಕಾಡೆಮಿ ಸ್ಥಾಪನೆಗೆ ಒತ್ತಡ

ಸೋಮವಾರ, ಮೇ 20, 2019
30 °C

ಕೇರಳ ಕೊಂಕಣಿ ಅಕಾಡೆಮಿ ಸ್ಥಾಪನೆಗೆ ಒತ್ತಡ

Published:
Updated:

ಕಾಸರಗೋಡು: ಕಾಸರಗೋಡಿನಲ್ಲಿ ಕೇರಳ ಕೊಂಕಣಿ ಅಕಾಡೆಮಿ ಸ್ಥಾಪಿಸಲು ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಶಾಸಕ ಎನ್.ಎ.ನೆಲ್ಲಿಕುಂಜೆ ಹೇಳಿದರು.ನಗರದ ಲಲಿತಕಲಾ ಸದನದಲ್ಲಿ ಕರ್ನಾಟಕ ಕೊಂಕಣಿ ಅಕಾಡೆಮಿ ಮತ್ತು ಶ್ರೀ ವರದರಾಜ ವೆಂಕಟರಮಣ ದೇವಸ್ಥಾನದ ಗೌಡ ಸಾರಸ್ವತ ಸೇವಾ ಸಂಘದ ಆಶ್ರಯದಲ್ಲಿ ಶನಿವಾರ ನಡೆದ `ಗಡಿನಾಡು ಕೊಂಕಣಿ ಸಂಸ್ಕೃತಿ ಸಂಭ್ರಮ~ವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾಸರಗೋಡು ಸಪ್ತಭಾಷಾ ಸಂಗಮ ಭೂಮಿಯಾಗಿದ್ದು, ಇಲ್ಲಿನ ಸಂಸ್ಕೃತಿ-ಸಾಹಿತ್ಯ ಸಂವರ್ಧನೆಗೆ ಸಪ್ತಭಾಷಾ ಕೇಂದ್ರ ಸ್ಥಾಪಿಸಬೇಕು. ಈ ಬಗ್ಗೆ ಸರ್ಕಾರದ ಗಮನಸೆಳೆದಿದ್ದೇನೆ. ಎಲ್ಲಾ ಭಾಷೆಗಳಿಗೂ ಪ್ರತ್ಯೇಕ ಅಕಾಡೆಮಿ ಸ್ಥಾಪಿಸುವ ಅಗತ್ಯವಿದೆ. ಇದರ ಬಗ್ಗೆ ರಾಜ್ಯ ಸಂಸ್ಕೃತಿ ಸಚಿವರ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕಾಸರಗೋಡು ಚಿನ್ನಾ ಮಾತನಾಡಿ, ಕೊಂಕಣಿ ಭಾಷೆ-ಸಾಹಿತ್ಯ-ಸಂಸ್ಕೃತಿಯ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ. ಅಕಾಡೆಮಿ ಕಚೇರಿಯಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.ಗೌಡ ಸಾರಸ್ವತ ಸೇವಾ ಸಂಘದ ಟ್ರಸ್ಟಿ ಕೆ.ಗಿರಿಧರ್ ಕಾಮತ್, ಅವರ್ ಲೇಡಿ ಆಫ್ ಡಾಲರ್ಸ್‌ ಇಗರ್ಜಿಯ ಧರ್ಮಗುರು ನವೀನ್ ಡಿ~ಸೋಜಾ, ಕಾಟುಕುಕ್ಕೆ ದುರ್ಗಾಪರಮೆಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಜಯಂತ ನಾಯಕ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಮಂಗಲ್ಪಾಡಿ ನಾಮದೇವ ಶೆಣೈ,  ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ.ಭಟ್, ಉಪ್ಪಂಗಳ ನಾರಾಯಣ ಶರ್ಮ, ಗೌಡ ಸಾರಸ್ವತ ಸೇವಾ ಸಂಘದ ಅಧ್ಯಕ್ಷ ಎಂ.ವರದರಾಜ ಶೆಣೈ, ಕರ್ನಾಟಕ ಕೊಂಕಣಿ ಅಕಾಡೆಮಿಯ ರಿಜಿಸ್ಟ್ರಾರ್ ಡಾ.ಬಿ.ದೇವದಾಸ್ ಪೈ, ಕೆ.ಪಿ.ಶೆಣೈ, ಎ.ರವೀಂದ್ರ ರಾವ್ ಮತ್ತಿತರರು ಇದ್ದರು.ಬಳಿಕ ಬಹುಭಾಷಾ ಕವಿಗೋಷ್ಠಿ, ನೃತ್ಯವೈವಿಧ್ಯ, ಶಿವಮೊಗ್ಗದ ವಾಗ್ದೇವಿ ಮಹಿಳಾ ಯಕ್ಷರಂಗದ `ವೀರ ಅಭಿಮನ್ಯು~ ಕೊಂಕಣಿ ಮಹಿಳೆಯರ ಯಕ್ಷಗಾನ ನಡೆಯಿತು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry