ಮಂಗಳವಾರ, ಮೇ 18, 2021
30 °C

ಕೇರಳ ತಂಡದ ಕೋಚ್ ಆಗಿ ಸುಜಿತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಚ್ಚಿ (ಪಿಟಿಐ): ಭಾರತ ಹಾಗೂ ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುಜಿತ್ ಸೋಮಸುಂದರ್ ಅವರು ಕೇರಳ ರಣಜಿ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ.ಮುಂಬರುವ ಋತುವಿನಲ್ಲಿ ಸುಜಿತ್ ರಾಜ್ಯ ಸೀನಿಯರ್ ತಂಡದಲ್ಲಿ ಕೋಚ್ ಆಗಿ ಕೆಲಸ ಆರಂಭಿಸಲಿದ್ದಾರೆ ಎಂದು ಕೇರಳ ಕ್ರಿಕೆಟ್ ಸಂಸ್ಥೆಯ (ಕೆಸಿಎ) ಪ್ರಕಟಣೆ ತಿಳಿಸಿದೆ.39 ವರ್ಷ ವಯಸ್ಸಿನ ಸೋಮಸುಂದರ್ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ತಲಾ ಒಂದು ಅಂತರರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ತಂಡ ಪ್ರತಿನಿಧಿಸಿದ್ದರು.99 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಆರಂಭಿಕ ಬ್ಯಾಟ್ಸ್‌ಮನ್ ಸುಜಿತ್ ಮೂರು ವರ್ಷ ಕರ್ನಾಟಕ ರಣಜಿ ತಂಡದ ನಾಯಕತ್ವ ವಹಿಸಿದ್ದರು. ಅಷ್ಟು ಮಾತ್ರವಲ್ಲದೇ, ಕೇರಳ ಪರ ಕೂಡ ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.