ಶನಿವಾರ, ಏಪ್ರಿಲ್ 17, 2021
32 °C

ಕೇವಿಯಟ್ ಸ್ಲ್ಲಲಿಸಲು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: `ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಖರಾಬು ಭೂಮಿ ಖಾತೆ ಬದಲಾವಣೆ ಮಾಡಿ ಹೊರಡಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಪಿ.ಎಸ್.ವಸ್ತ್ರದ್ ಹಿಂಪಡೆದಿರುವುದನ್ನು ಪ್ರಶ್ನಿಸಿ ಹಿಡುವಳಿದಾರರು ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದೆ. ಆದ್ದರಿಂದ ಪ್ರಜ್ಞಾವಂತ ನಾಗರಿಕರ ವೇದಿಕೆ (ಎಸಿಐಸಿಎಂ) ಹೈಕೋರ್ಟ್‌ನಲ್ಲಿ  ಕೇವಿಯಟ್ ಅರ್ಜಿ ಸಲ್ಲಿ ಸಲಿದೆ~ ಎಂದು ಸಂಚಾಲಕ ಎಂ.ಲಕ್ಷ್ಮಣ್ ತಿಳಿಸಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಅಂದಾಜು ಎರಡು ಸಾವಿರ ಎಕರೆ `ಬಿ~ ಖರಾಬು ಭೂಮಿಯನ್ನು `ಎ~ ಖರಾಬಿಗೆ ಖಾತೆ ಬದಲಾವಣೆ ಮಾಡಿ ಹೊರಡಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿಗಳೇ ಹಿಂಪಡೆದಿದ್ದಾರೆ. ಇದರಿಂದ ಭೂ ಹಿಡುವಳಿದಾರರಿಗೆ ಮತ್ತೊಂದು ಅಸ್ತ್ರ ನೀಡಿದಂತಾಗಿದೆ. ಜಿಲ್ಲಾಧಿಕಾರಿಗಳು ಹಿಂಪಡೆದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತರುವ ಅವಕಾಶ ಇದೆ. ಹಾಗಾಗಿ 12 ಮಂದಿ ಮೂಲ ಹಿಡುವಳಿದಾರರಿಗೆ ತಡೆಯಾಜ್ಞೆ ನೀಡದಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು~ ಎಂದರು.`ಕರ್ನಾಟಕ ಭೂ ಕಂದಾಯ ಕಾಯಿದೆ ಕಲಂ 136 (2) ಪ್ರಕಾರ ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಪ್ರಶ್ನಿಸಬಹುದು. ಇಲ್ಲವೇ, ಆದೇಶ ಹೊರಬಿದ್ದ 60 ದಿನಗಳ ಒಳಗಾಗಿ ಪ್ರಾದೇಶಿಕ ಆಯುಕ್ತರಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು. ಆದರೆ ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶವನ್ನು ತಾವೇ ಹಿಂಪಡೆಯುವ ಅವಕಾಶ ಇಲ್ಲ. ಶಾಸಕರೊಬ್ಬರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿರುವುದನ್ನು ಆಧರಿಸಿ ಆದೇಶ ಹಿಂಪಡೆಯುವುದು ಕೂಡ ಕಾನೂನು ಬಾಹಿರ. ಒಂದು ತಪ್ಪನ್ನು ಮುಚ್ಚಿಹಾಕುವ ಪ್ರಯತ್ನದಲ್ಲಿ ವಸ್ತ್ರದ್ ಅವರು ಮತ್ತೊಂದು ಪ್ರಮಾದ ಎಸಗಿದ್ದಾರೆ. ಇದರ ಪರಿಣಾಮವಾಗಿ ಜಿಲ್ಲಾಧಿಕಾರಿಗಳು ಹೊರಡಿಸಿ ಮೊದಲ ಆದೇಶ ಮರುಜೀವ ಪಡೆಯಲಿದೆ~ ಎಂದರು.`ಈ ಪ್ರಕರಣದ ಹಿಂದೆ ಪ್ರಮುಖ ರಾಜಕಾರಣಿಗಳ ಕೈವಾಡವಿದ್ದು, ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಈ ಕುರಿತು ಜಿಲ್ಲಾಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ರಾಜ್ಯಪಾಲರ ಅನುಮತಿ ಕೋರಲಾಗುವುದು. ಸರ್ಕಾರ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ ಅಥವಾ ಸಿಬಿಐ ತನಿಖೆಗೆ ವಹಿಸಬೇಕು. ಸೂಕ್ತ ತನಿಖೆಯ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಚಾಮುಂಡಿಬೆಟ್ಟದ ಸುತ್ತ ಭೂ ಮಾಫಿಯಾಕ್ಕೆ ಬಲಿಯಾಗುತ್ತಿರುವ ಜಾಗವನ್ನು ಉಳಿಸಬೇಕು~ ಎಂದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.