ಶುಕ್ರವಾರ, ಮೇ 14, 2021
32 °C

ಕೈಗಾರಿಕಾ ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆಗೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ `ಕೈಗಾರಿಕಾ ಕೌಶಲ್ಯ ತರಬೇತಿ ಸಂಸ್ಥೆ' ಪ್ರಾರಂಭಿಸುವ ಚಿಂತನೆ ನಡೆದಿದೆ ಎಂದು ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಎನ್. ವಿದ್ಯಾಶಂಕರ್ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಸ್ಥೆಯನ್ನು ಪ್ರಾರಂಭಿಸುವ ಸಲುವಾಗಿ ಇಲಾಖೆ ಕೈಗಾರಿಕೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದೆ ಎಂದರು.ಎಂಜಿನಿಯರಿಂಗ್ ಮುಗಿಸಿ ಹೊರಬಂದ ತಕ್ಷಣ ವಿದ್ಯಾರ್ಥಿಗಳಿಗೆ ಈ ಸಂಸ್ಥೆಯಲ್ಲಿ 6 ತಿಂಗಳ ಕಾಲ ವೃತ್ತಿ ಕೌಶಲದ ಬಗ್ಗೆ ತರಬೇತಿ ನೀಡಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ವೃತ್ತಿ ಕೌಶಲ ಹಾಗೂ ಕೆಲಸದ ಅನುಭವ ಹೆಚ್ಚಾಗಿ ಸುಲಭವಾಗಿ ಕೆಲಸ ದೊರೆಯುತ್ತದೆ ಎಂದು ವಿವರಿಸಿದರು.  ಈಗಾಗಲೇ ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಇದು ಯಶಸ್ವಿಯಾದರೆ ರಾಜ್ಯದಾದ್ಯಂತ ಇದನ್ನು ವಿಸ್ತರಿಸುವ ಯೋಚನೆ ಇದೆ. ಇದರಿಂದ ಪ್ರತಿ ವರ್ಷ ಎಂಜಿನಿಯರಿಂಗ್ ಕಾಲೇಜುಗಳಿಂದ ಹೊರ ಬರುವ 50 ರಿಂದ 60 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ  ಎಂದು ತಿಳಿಸಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ರಾಮನ್ ಇಂಟರ್ ನ್ಯಾಷನಲ್ ಇನ್‌ಸ್ಟಿಟ್ಯುಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ (ಆರ್‌ಐಐಐಟಿ) ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಮೈಸೂರಿನಲ್ಲಿ ತರಬೇತಿ ಕಾರ್ಯಕ್ರಮ ಜುಲೈ ತಿಂಗಳಿನಿಂದ ಪ್ರಾರಂಭವಾಗಲಿದೆ ಎಂದು ಆರ್‌ಐಐಐಟಿಯ ನಿರ್ವಾಹಕ ನಿರ್ದೇಶ ಎಸ್.ವಿ.ವೆಂಕಟೇಶ್ ತಿಳಿಸಿದರು.ಈ ತರಬೇತಿಯಲ್ಲಿ ಎಂಜಿನಿಯರಿಂಗ್ ವಿಭಾಗದಲ್ಲಿ 400 ವಿದ್ಯಾರ್ಥಿಗಳಿಗೆ ಹಾಗೂ ಎಂಸಿಎ, ಎಂಎಸ್‌ಸಿ (ಐಟಿ) ವಿಭಾಗದಲ್ಲಿ 200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿ 22,500 ರೂಪಾಯಿ ಪ್ರವೇಶ ಶುಲ್ಕ ನೀಡಿ, ಪ್ರವೇಶ ಪಡೆಯಬೇಕಾಗುತ್ತದೆ. 2012- 13ರಲ್ಲಿ ಎಂಜಿನಿಯರಿಂಗ್ ಮುಗಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅವರು ವಿವರಿಸಿದರು. ಸಂಪರ್ಕಿಸಬೇಕಾದ ವಿಳಾಸ: ದೂರವಾಣಿ ಸಂಖ್ಯೆ: 9535614323,  7411910069, ಇ-ಮೇಲ್ ವಿಳಾಸ: hr@riiit.com

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.