ಕೈಗಾರಿಕಾ ಸಂಸ್ಥೆಗಳ ರಾಜ್ಯ ಮಟ್ಟದ ಸಮ್ಮೇಳನ ನಾಳೆ

7

ಕೈಗಾರಿಕಾ ಸಂಸ್ಥೆಗಳ ರಾಜ್ಯ ಮಟ್ಟದ ಸಮ್ಮೇಳನ ನಾಳೆ

Published:
Updated:

ಗುಲ್ಬರ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ರಾಜ್ಯ ಮಟ್ಟದ ಮೂರನೇ ಸಮ್ಮೇಳನ ಈ ತಿಂಗಳ 22 ರಂದು ಗುಲ್ಬರ್ಗದಲ್ಲಿ ನಡೆಯಲಿದೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಹಾಗೂ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ) ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ರಾಜ್ಯದ ಕೈಗಾರಿಕೆಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಎಚ್‌ಕೆಸಿಸಿಐ ಅಧ್ಯಕ್ಷ ಗೋಪಾಲಕೃಷ್ಣ ವಿ.ರಘೋಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಿಂದಿನ ಎರಡು ಸಮ್ಮೇಳನಗಳು ಬೆಂಗಳೂರಿನಲ್ಲಿ ನಡೆದಿವೆ. ಇದೇ ಮೊದಲ ಬಾರಿಗೆ ಈ ಭಾಗಕ್ಕೆ ಸಮ್ಮೇಳನ ನಡೆಸುವ ಅವಕಾಶ ದೊರಕಿದೆ. ಉದ್ಯಮಗಳಿಗೆ ಬರಬೇಕಾಗಿರುವ ಸಬ್ಸಿಡಿ ಬಿಡುಗಡೆ, ಕೆಐಡಿಬಿ ಕೈಗಾರಿಕಾ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕ್ರಮ, ಉದ್ಯಮಿಗಳಿಗೆ ಟ್ರೇಡ್ ಲೈಸನ್ಸ್ ನೀಡಲು ಏಕ ಗವಾಕ್ಷಿ ವ್ಯವಸ್ಥೆ, ಗುಲ್ಬರ್ಗದಲ್ಲಿ ವಿಭಾಗೀಯ ರೈಲ್ವೆ ಕಚೇರಿ ಸ್ಥಾಪನೆ, ಗುಲ್ಬರ್ಗದಿಂದ ಬೆಂಗಳೂರಿಗೆ ನೇರ ರೈಲು ಸೌಲಭ್ಯ ಮತ್ತಿತರ ಬೇಡಿಕೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವರಿಸಿದರು.

ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುವ ಸಮ್ಮೇಳನವನ್ನು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry