ಕುಶಾಲನಗರ: ಕೈಗಾರಿಕೋದ್ಯಮ ಸ್ಥಾಪನೆಗೆ ಪೂರಕ ವಾತಾವರಣ ಹೊಂದಿರುವ ಕುಶಾಲನಗರ ಹೋಬಳಿಯಲ್ಲಿ ಜವಳಿ, ಐಟಿ, ಬಿಟಿ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆ ಕುರಿತು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸುವುದಾಗಿ ಇಂಡಸ್ಟ್ರೀಸ್ನ ಅಧ್ಯಕ್ಷ ಜಿ.ಚಿದ್ವಿಲಾಸ್ ಭಾನುವಾರ ಹೇಳಿದರು.

ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ನ ಕುಶಾಲನಗರ ಸ್ಥಾನೀಯ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂಸ್ಥೆಯು ಈಗಾಗಲೇ 1.75 ಲಕ್ಷ ನಿರಕು ಠೇವಣಿಯನ್ನು ಬ್ಯಾಂಕಿನಲ್ಲಿ ಜಮಾ ಮಾಡುವ ಮೂಲಕ ಕ್ಷೇಮಾಭಿವೃದ್ಧಿ ನಿಧಿ, ಮರಣ ನಿಧಿ, ಪ್ರಕೃತಿ ವಿಕೋಪ ನಿಧಿಗಳನ್ನು ಸ್ಥಾಪಿಸಿ ವ್ಯಾಪಾರಸ್ಥರ ಹಿತ ಕಾಯಲು ಚಿಂತನೆ ನಡೆಸಲಾಗಿದೆ ಎಂದು ಚಿದ್ವಿಲಾಸ್ ಹೇಳಿದರು.

ಎಲ್ಲಾ ವ್ಯಾಪಾರಸ್ಥರು ಸದಸ್ಯತ್ವ ಪಡೆಯುವ ಮೂಲಕ ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಕೊಡಗು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಸಂಕೀರ್ಣ ಟ್ರಸ್ಟ್ ಅಧ್ಯಕ್ಷ ಎಂ.ಬಿ.ದೇವಯ್ಯ, ಕೊಡಗು ಜಿಲ್ಲಾ ವಾಣಿಜ್ಯ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿದರು.
ಸಂಸ್ಥೆಯ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಆರ್.ರವಿಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಬಿ.ಆರ್.ನಾಗೇಂದ್ರಪ್ರಸಾದ್, ಜಿಲ್ಲಾ ಪ್ರವಾಸೋದ್ಯಮ ಉಪ ಸಮಿತಿ ಸಂಚಾಲಕ ಎಸ್.ಕೆ.ಸತೀಶ್, ಕಾರ್ಯದರ್ಶಿ ಬಿ. ಅಮೃತ್ರಾಜ್ ಉಪಸ್ಥಿತರಿದ್ದರು.

ಅಮೃತ್ರಾಜ್ ವಾರ್ಷಿಕ ವರದಿ ಓದಿದರು. ಖಜಾಂಜಿ ರವೀಂದ್ರ ರೈ ಲೆಕ್ಕಪತ್ರ ಮಂಡಿಸಿದರು. ಸಹ ಕಾರ್ಯದರ್ಶಿ ಕೆ.ಎಸ್.ನಾಗೇಶ್ ನಿರ್ವಹಿಸಿದರು. ಇದೇ ವೇಳೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ. ಕಿಶೋರ್ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.