ಕೈದಿಗಳಿಗೆ ಗಾಂಜಾ; ಒಬ್ಬನ ಬಂಧನ

7

ಕೈದಿಗಳಿಗೆ ಗಾಂಜಾ; ಒಬ್ಬನ ಬಂಧನ

Published:
Updated:

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ಗಾಂಜಾ ಪೂರೈಸುತ್ತಿದ್ದ ಆರೋಪದ ಮೇಲೆ ದೇವರಜೀವನಹಳ್ಳಿಯ ಸೈಯದ್ ಹಸನ್ (21) ಎಂಬಾತನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಆರೋಪಿಯಿಂದ 75 ಸಾವಿರ ರೂಪಾಯಿ ಮೌಲ್ಯದ ಐದು ಕೆ.ಜಿ ಗಾಂಜಾ, ಎರಡು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಆಟೊವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಜೈಲಿನ ಕೈದಿಗಳಿಗೆ ಮಾರಲು ಆಟೊದಲ್ಲಿ ಗಾಂಜಾ ತೆಗೆದುಕೊಂಡು ಹೋಗುತ್ತಿದ್ದ ಸೈಯದ್‌ನನ್ನು ಹೊಸೂರು ರಸ್ತೆಯ ಬೊಮ್ಮನಹಳ್ಳಿ ಜಂಕ್ಷನ್ ಸಮೀಪ ಅಡ್ಡಗಟ್ಟಿ ಬಂಧಿಸಲಾಯಿತು. ‘ಆನೇಕಲ್‌ನ ಜೈಭೀಮಾ ನಗರ ಕಾಲೊನಿಯ ರಾಮಣ್ಣ ಎಂಬಾತನಿಂದ ಗಾಂಜಾ ಖರೀದಿಸಿ ತಂದು ಜೈಲಿನ ಕೈದಿಗಳಿಗೆ ಮತ್ತು ಕೈದಿಗಳನ್ನು ಭೇಟಿ ಮಾಡಲು ಬರುತ್ತಿದ್ದ ವ್ಯಕ್ತಿಗಳಿಗೆ, ಆಟೊ ಚಾಲಕರಿಗೆ ಮಾರುತ್ತಿದ್ದೆ’ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ ಅಪರಾಧ ವಿಭಾಗದ ಎಸಿಪಿ ಆರ್.ಲಕ್ಷ್ಮಣ್ ಮತ್ತು ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry