ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಬುಧವಾರ, ಮೇ 22, 2019
24 °C

ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

Published:
Updated:

ಕೆಂಗೇರಿ:  ಕೇಂದ್ರ ಜವಳಿ ಸಚಿವಾಲಯದ ಸಹಯೋಗದಲ್ಲಿ ಕರಕುಶಲ ಮತ್ತು ಕೈಮಗ್ಗ ಸಂಸ್ಥೆಯು ಕೆಂಗೇರಿ ಉಪನಗರದ ಮೈದಾನದಲ್ಲಿ ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದೆ.ದೇಶದ ವಿವಿಧ ಕಡೆಗಳಿಂದ ಆಗಮಿಸಿರುವ ಕುಶಲಕರ್ಮಿಗಳು ಸಿದ್ಧಪಡಿಸಿದ ಕರಕುಶಲ ವಸ್ತುಗಳು ಮಾರಾಟಕ್ಕಿವೆ. ಇದೇ 26ರವರೆಗೆ ಮೇಳ ನಡೆಯಲಿದ್ದು, ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಬಹುದು.ಕೈಮಗ್ಗ ವಸ್ತುಗಳು, ಗುಡಿ ಕೈಗಾರಿಕಾ ಉತ್ಪನ್ನಗಳು, ಬಣ್ಣ ಬಣ್ಣದ ಕರಕುಶಲ ಆಟಿಕೆಗಳು, ಗೃಹೋಪಯೋಗಿ ಸಾಮಗ್ರಿಗಳು, ಅಲಂಕಾರಿಕ ವಸ್ತುಗಳು, ಹೊದಿಕೆಗಳು, ಉಡುಪುಗಳು, ಕಸೂತಿ ಉತ್ಪನ್ನಗಳು ಮೇಳದಲ್ಲಿವೆ.

ಸಚಿವೆ ಶೋಭಾ ಕರಂದ್ಲಾಜೆ ಅವರು ಮೇಳವನ್ನು ಇತ್ತೀಚೆಗೆ ಉದ್ಘಾಟಿಸಿದರು. ಪಾಲಿಕೆ ಸದಸ್ಯ ರಾ.ಆಂಜನಪ್ಪ ಇತರರು ಹಾಜರಿದ್ದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry