ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿ ಜುಲೈ 20 ರಿಂದ 22ರವರೆಗೆ ಗುರುಪೂಜಾ ಮಹೋತ್ಸವ, ಸಂಗೀತೋತ್ಸವ ಹಮ್ಮಿಕೊಳ್ಳಲಾಗಿದ್ದು, ಮೂರು ದಿನಗಳ ಕಾಲ ನಿರಂತರ 72 ಗಂಟೆ ಕಾಲ ಸಂಗೀತ ಕಾರ್ಯಕ್ರಮ ನಡೆಯಲಿವೆ ಎಂದು ಯೋಗಿನಾರೇಯಣ ನಾದಸುಧಾರಸ ಸಂಕೀರ್ತನಾ ಯೋಜನೆ ಸಂಚಾಲಕ ವನರಾಶಿ ಬಾಲಕೃಷ್ಣ ಭಾಗವತರ್ ತಿಳಿಸಿದರು.

ಮೂರು ದಿನಗಳ ಕಾಲ ಸಂಗೀತೋತ್ಸವ ನಡೆಯಲಿದ್ದು, ಪ್ರತಿ ದಿನ ಬೆಳಿಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದ ಹೆಸರಾಂತ ಕಲಾವಿದರು ಸಂಗೀತೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಕಛೇರಿಗಳು ನಡೆಯುವುದು. ನಾದಸ್ವರ-ತವಿಲ್ ವಾದನ, ಭರತನಾಟ್ಯ, ಹರಿಕಥೆ, ಬುರ್ರಕಥೆ ನಡೆಯಲಿವೆ. ರಾತ್ರಿ 11 ಗಂಟೆಯ ನಂತರ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಹಿರಿಯ ಮತ್ತು ಕಿರಿಯ ಸಂಗೀತಗಾರರಿಗೆ ಅವಕಾಶ ನೀಡಲಾಗಿದ್ದು, ಅವರ ಸಂಗೀತ ಕಛೇರಿಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು. ಕೈವಾರ ಮಠದ ವ್ಯವಸ್ಥಾಪಕ ಲಕ್ಷ್ಮಿನಾರಾಯಣ ಮತ್ತು ಬಲಿಜ ಸಂಘದ ಅಧ್ಯಕ್ಷ ಭದ್ರಚಲಂ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.