ಶನಿವಾರ, ಮಾರ್ಚ್ 6, 2021
28 °C

ಕೊಟ್ಟಿಗೆಗೆ ನುಗ್ಗಿದ ಚಿರತೆ: 10 ಗಂಟೆ ಕಾರ್ಯಾಚರಣೆ ಬಳಿಕ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಟ್ಟಿಗೆಗೆ ನುಗ್ಗಿದ ಚಿರತೆ: 10 ಗಂಟೆ ಕಾರ್ಯಾಚರಣೆ ಬಳಿಕ ಸೆರೆ

ರಾಮನಗರ: ಆಹಾರ ಅರಸಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯೊಂದನ್ನು ಅರಣ್ಯ ಅಧಿಕಾರಿಗಳು ಸತತ 10 ಗಂಟೆಗಳ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿರುವ ಘಟನೆ ತಾಲ್ಲೂಕಿನ ಬಾಳಲಿಂಗೇಗೌಡನ ದೊಡ್ಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ಗ್ರಾಮದ ಜೋಗಿ ಸಿದ್ದಯ್ಯ ಅವರಿಗೆ ಸೇರಿದ ಕುರಿ ಕೊಟ್ಟಿಗೆಗೆ ಶನಿವಾರ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ಚಿರತೆ ಬಂದಿದೆ. ಒಂದು ಕುರಿಯನ್ನು ಬಲಿ ಪಡೆದ ಚಿರತೆಯನ್ನು ಕಂಡು ಕುರಿಗಳು ಸದ್ದು ಮಾಡಲು ಆರಂಭಿಸಿವೆ.ಚಿರತೆ ಕೊಟ್ಟಿಗೆ ಒಳ ಹೊಕ್ಕಿರುವುದನ್ನು ಕಂಡು ಮನೆ ಮಾಲೀಕ ಜೋಗಿ ಸಿದ್ದಯ್ಯ ಗಾಬರಿಗೊಂಡಿದ್ದಾರೆ. ತಕ್ಷಣ ಕೊಟ್ಟಿಗೆ ಬಾಗಿಲು ಭದ್ರ ಪಡಿಸಿಕೊಂಡು ಅಕ್ಕಪಕ್ಕದ ಮನೆಯವರಿಗೆ ವಿಚಾರ ಮುಟ್ಟಿಸಿದ್ದಾರೆ.ಆನಂತರ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ ಆಗಮಿಸಿದ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕೊಟ್ಟಿಗೆಯಲ್ಲಿ ಚಿರತೆ ಇರುವುದನ್ನು ಖಾತ್ರಿ ಪಡಿಸಿಕೊಂಡು, ಅದು ಎಲ್ಲಿಯೂ ಪರಾರಿಯಾಗಲು ಅವಕಾಶವಾಗದಂತೆ ಎಚ್ಚರ ವಹಿಸಿದ್ದಾರೆ.ಅರಣ್ಯಾಧಿಕಾರಿಗಳು ಚಿರತೆಯನ್ನು ಜೀವಂತವಾಗಿ ಸೆರೆ ಹಿಡಿಯುವ ಸಲುವಾಗಿ ಬನ್ನೇರುಘಟ್ಟದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಲ್ಲಿಂದ ಬಂದ ಅರಣ್ಯ ಇಲಾಖೆ ಅಧಿಕಾರಿ ಅನುಪಮಾ ಕೊಟ್ಟಿಗೆಯಲ್ಲಿದ್ದ ಚಿರತೆಗೆ ಅರವಳಿಕೆ ಮದ್ದು ನೀಡಿದ್ದಾರೆ.ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚಿರತೆಯನ್ನು ಬಲೆಯಲ್ಲಿ ಹಿಡಿದ ನಂತರ ಬೂನ್  ನಲ್ಲಿ  ಹಾಕಿಕೊಂಡು ಪ್ರಥಮ ಚಿಕಿತ್ಸೆ ನೀಡಲು ಕೊಂಡೊಯ್ದರು. ಚಿರತೆ ಆರೋಗ್ಯವಾಗಿದ್ದು, ಅದನ್ನು ಬನ್ನೇರುಘಟ್ಟ ಅರಣ್ಯದಲಿ ಬಿಡಲಾಗುವುದು ಎಂದು ಅರಣ್ಯಾಧಿಕಾಧಿಕಾರಿಗಳು ತಿಳಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮಂಜುನಾಥ್, ಮಾಗಡಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ದಾಳೇಶ್ ಹಾಗೂ ಪೊಲೀಸ್ ಅಧಿಕಾರಿಗಳು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.