ಬುಧವಾರ, ಮೇ 18, 2022
27 °C

ಕೊಡಗು ಜಿಲ್ಲೆ: 28 ವಾಂತಿಭೇದಿ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ, ನಂಜರಾಯಪಟ್ಟಣ, ಬಸವನಹಳ್ಳಿ, ದೊಡ್ಡ ಹೊಸೂರು, ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಾಂತಿಭೇದಿ ಪ್ರಕರಣಗಳು ವರದಿಯಾಗುತ್ತಿದ್ದು, ಗುರುವಾರ ಮತ್ತೆ ಇಬ್ಬರು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಗೆ ವಾಂತಿಭೇದಿಯಿಂದ 28 ಮಂದಿ ದಾಖಲಾಗಿದ್ದಾರೆ. ವಾಂತಿಭೇದಿಯಿಂದ ತೀವ್ರ ಅಸ್ವಸ್ಥಗೊಂಡ ಕುಶಾಲನಗರ ಸಮೀಪದ ಬಸವನಹಳ್ಳಿಯ ಮಮತ (6) ಮತ್ತು ದೊಡ್ಡ ಹೊಸೂರಿನ ಪ್ರಕಾಶ್ (22) ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಬಸವನಹಳ್ಳಿ ಗಿರಿಜನ ಹಾಡಿಯಲ್ಲಿ ವಾಂತಿಭೇದಿಯಿಂದ 11 ವರ್ಷದ ಮಂಜುಳ ಸಾವನ್ನಪ್ಪಿದ್ದಾಳೆ.ಕುಶಾಲನಗರದ ಸುತ್ತಮುತ್ತಲಿನ 7ನೇ ಹೊಸಕೋಟೆ, ಕೊಪ್ಪ, ಬಸವನಹಳ್ಳಿ, ನಂಜರಾಯಪಟ್ಟಣದಲ್ಲಿ ವಾಂತಿಭೇದಿ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ಹಲವು ಜನರಿಗೆ ಇಲ್ಲಿ ಚಿಕಿತ್ಸೆ ನೀಡಲಾಗಿದ್ದು,  ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ನಂಜರಾಯಪಟ್ಟಣದಲ್ಲಿ ಪೂರೈಕೆಯಾಗುತ್ತಿದ್ದ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ಕಲ್ಮಶ ಕಂಡುಬಂದ ಹಿನ್ನೆಲೆಯಲ್ಲಿ ಈ ನೀರಿನ ಪೂರೈಕೆಯನ್ನು ನಿಲ್ಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.