ಬುಧವಾರ, ಏಪ್ರಿಲ್ 21, 2021
23 °C

ಕೊಡವ ಭಾಷೆ ಪಠ್ಯಪುಸ್ತಕ ರಚನೆಗೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡವ ಭಾಷೆಯನ್ನು ಮೂರನೇ ಭಾಷೆಯಾಗಿ ಸರ್ಕಾರ ಆದೇಶ ಹೊರಡಿಸಬೇಕು. 6ನೇ ತರಗತಿಯಿಂದ 10ನೇ ತರಗತಿ ವರೆಗೆ ಕೊಡವ ಭಾಷೆಯಲ್ಲೇ ಅಧ್ಯಯನ ಮಾಡಲು ಪಠ್ಯ ಪುಸ್ತಕ ರಚಿಸುವಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಡ್ಡಂಡ ಸಿ.ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೊಡವ ಸಾಹಿತ್ಯ ಅಕಾಡೆಮಿಯ ಕಚೇರಿಯಲ್ಲಿ ನಡೆದ ಕೊಡವ ಭಾಷಾ ತಜ್ಞರ ಸಭೆಯಲ್ಲಿ, ಕೊಡವ ಭಾಷೆ ಅಲ್ಪಸಂಖ್ಯಾತ ಭಾಷೆಯಾಗಿದೆ. ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಿಲ್ಲೆಯ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಸರ್ಕಾರದಿಂದ ಈ ಆದೇಶ ಪಡೆಯಲು ನಿರ್ಣಯಿಸಲಾಯಿತು.ಸರ್ಕಾರದ ಮಟ್ಟದಲ್ಲಿ ಈ ಕುರಿತು ಚರ್ಚಿಸಲು 9 ಜನ ತಜ್ಞರ ಸಮಿಯನ್ನು ರಚಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾರಂಭಗೊಳ್ಳಲಿರುವ ಕೊಡವ ಸರ್ಟಿಫಿಕೇಟ್ ಆಫ್ ಕೋರ್ಸ್, ಪದವಿ ಮತ್ತು ಸ್ನಾತಕೋತ್ತರ ಪದವಿಗೆ ಕೊಡವ ಡಿಪ್ಲೊಮಾ ಕೋರ್ಸ್‌ಗೆ ಪಠ್ಯ ಪುಸ್ತಕ ರಚಿಸಲು ಚರ್ಚಿಸಲಾಯಿತು.

ಸಭೆಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ಶಾಂತಮ್ಮ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.