ಶ್ರೀನಿವಾಸಪುರ: ಸಾಮೂಹಿಕ ಜ್ವರ ಬಾಧೆಗೆ ತುತ್ತಾಗಿರುವ ತಾಲ್ಲೂಕಿನ ಕೊತ್ತಪೇಟ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುಮಾರು 50ಕ್ಕೂ ಹೆಚ್ಚು ಮಂದಿ ಜ್ವರ ಪೀಡಿತರಾಗಿ, ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೊಳ್ಳೆ ಕಡಿತ ಮತ್ತು ಅಶುದ್ಧ ನೀರು ಸೇವನೆಯಿಂದ ಸಾಮೂಹಿಕವಾಗಿ ಜ್ವರ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ನಾಗರಿಕರಿಗೆ ಮುಂಜಾಗ್ರತೆ ವಹಿಸಲು ಸೂಚಿಸಲಾಯಿತು.

ಈಗ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಶಿಬಿರ ಪ್ರಾರಂಭಿಸಲಾಗಿದ್ದು, ಆರೋಗ್ಯಾಧಿಕಾರಿ ಡಾ. ಸುನಿತಾ ನೇತೃತ್ವದಲ್ಲಿ ಆರೋಗ್ಯ ಸಿಬ್ಬಂದಿ ಜ್ವರ ಪೀಡಿತರಿಗೆ ಚಿಕಿತ್ಸೆ ನೀಡುತ್ತ್ದ್ದಿದಾರೆ.ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಕಾಶ್ ಗ್ರಾಮಸ್ಥರೊಂದಿಗೆ ಮಾತನಾಡಿ, ನಾಗರಿಕರು ಗ್ರಾಮ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಸೊಳ್ಳೆ ಕಡಿಯದಂತೆ ಎಚ್ಚರ ವಹಿಸಬೇಕು.

ಸೊಳ್ಳೆ ಅಭಿವೃದ್ಧಿ ತಡೆಯಲು ಮನೆಗಳ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ತೆಂಗಿನ ಚಿಪ್ಪು, ಕಲ್ಲಿನ ಒರಳು ಮತ್ತು ಟೈರ್ಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಮಹ್ಮದ್ ಷರೀಫ್ ಮಾತನಾಡಿ, ವೈದ್ಯರು ಅಥವಾ ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಯನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ವೈದ್ಯರೊಂದಿಗೆ ಗ್ರಾಮದಲ್ಲಿ ಸುತ್ತಾಡಿ ಸಾರ್ವಜನಿಕರ ಆರೋಗ್ಯ ವಿಚಾರಿಸಿದರು. ಜ್ವರ ಪೀಡಿತ ಹಳ್ಳಿಯ ಜನರಿಗೆ ಉತ್ತಮ ಚಿಕಿತ್ಸೆ ನೀಡುವಂತೆ, ಸೊಳ್ಳೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.