ಕೊನೆಗೂ ಜೈಲಿನತ್ತ ನಡೆದ ನಟ ದರ್ಶನ್

ಶನಿವಾರ, ಮೇ 25, 2019
27 °C

ಕೊನೆಗೂ ಜೈಲಿನತ್ತ ನಡೆದ ನಟ ದರ್ಶನ್

Published:
Updated:

ಬೆಂಗಳೂರು: ಪತ್ನಿ ಕೊಲೆ ಯತ್ನ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಬುಧವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆದರೆ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಬೇಕಾಯಿತು.

 

ಪರಪ್ಪನ ಅಗ್ರಹಾರ ಕಾರಗೃಹದಲ್ಲಿ ಸದ್ಯಕ್ಕೆ ಅವರನ್ನು  ಕಟ್ಟಾ ಜಗದೀಶ್ ಅವರ ಕೊಠಡಿಯಲ್ಲೆ ಇರಿಸಲು ವ್ಯವಸ್ಥೆ ಮಾಡಲಾಗಿದೆ.ಪತ್ನಿ ಕೊಲೆ ಯತ್ನ ಆರೋಪದ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ ದಿನದಿಂದಲೇ ಅನಾರೋಗ್ಯದ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಡಾ.ಶಶಿಧರ್ ಬುಗ್ಗಿ ತಿಳಿಸಿದ್ದರು. ಕೊಲೆ ಯತ್ನ ಗಂಭೀರವಾದ ಪ್ರಕರಣ ಎಂದು ಅಭಿಪ್ರಾಯಪಟ್ಟ ಸೆಷನ್ಸ್ ನ್ಯಾಯಾಲಯ ಮಂಗಳವಾರ ನಟ ದರ್ಶನ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು.

  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry