ಕೊಪ್ಪಳ ಜಿಲ್ಲೆಗೆ ಮುಂದಿನ ಸಮ್ಮೇಳನ

7

ಕೊಪ್ಪಳ ಜಿಲ್ಲೆಗೆ ಮುಂದಿನ ಸಮ್ಮೇಳನ

Published:
Updated:ಬೆಂಗಳೂರು: ಮುಂದಿನ ವರ್ಷ ಕೊಪ್ಪಳ ಜಿಲ್ಲೆಯಲ್ಲಿ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ನಡೆದ ಪರಿಷತ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಕೋಲಾರ, ಬಳ್ಳಾರಿ, ಹಾವೇರಿ ಸೇರಿದಂತೆ ಅನೇಕ ಜಿಲ್ಲಾ ಘಟಕಗಳು 78ನೇ ಸಾಹಿತ್ಯ ಸಮ್ಮೇಳನ ಸಂಘಟಿಸಲು ಒಲವು ತೋರಿದ್ದವು. ಆದರೆ ಅಂತಿಮವಾಗಿ ಕೊಪ್ಪಳ ಜಿಲ್ಲೆಯಲ್ಲಿ ಸಮ್ಮೇಳನ ನಡೆಸಲು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೊಪ್ಪಳ ಅಥವಾ ಆ ಜಿಲ್ಲೆಯಲ್ಲಿ ಬರುವ ಗಂಗಾವತಿಯಲ್ಲಿ ಸಮ್ಮೇಳನ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry