ಶನಿವಾರ, ಮೇ 8, 2021
20 °C

ಕೊಪ್ಪಳ: 12 ಅಭ್ಯರ್ಥಿಗಳಿಂದ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಶುಕ್ರವಾರ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಉಮೇದುವಾರರು ಸೇರಿದಂತೆ ಒಟ್ಟು 12 ಜನ ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆಯಾಗಿವೆ.ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ, ಕಾಂಗ್ರೆಸ್‌ನ ಕೆ.ಬಸವರಾಜ ಹಿಟ್ನಾಳ್ ಹಾಗೂ ಜೆಡಿಎಸ್‌ನ ಪ್ರದೀಪಗೌಡ ಮಾಲಿಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ.ಅಲ್ಲದೇ, 8 ಜನ ಪಕ್ಷೇತರರು ಹಾಗೂ ಭಾರತೀಯ ರಿಪಬ್ಲಿಕ್ ಪಾರ್ಟಿಯ ಅಭ್ಯರ್ಥಿ ಸಹ ನಾಮಪತ್ರ ಸಲ್ಲಿಸಿದ್ದಾರೆ.ಇದುವರೆಗೆ ಒಟ್ಟು 19 ಜನ ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ. ಸೆ. 10ರಂದು  ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೆ. 12 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಸೆ. 26ರಂದು ಮತದಾನ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.