ಭಾನುವಾರ, ನವೆಂಬರ್ 17, 2019
21 °C

`ಕೊಯ್ನಾದಿಂದ ನೀರು ಬಿಟ್ಟಿಲ್ಲ'

Published:
Updated:

ಚಿಕ್ಕೋಡಿ: `ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮಂಗಳವಾರ ನೀರು ಹರಿಸಲಾಗಿಲ್ಲ' ಎಂದು ಇಲ್ಲಿನ ಉಪ ವಿಭಾಗಾಧಿಕಾರಿ ಡಾ.ರುದ್ರೇಶ ಘಾಳಿ ತಿಳಿಸಿದ್ದಾರೆ.ಜಲಾಶಯದಿಂದ ಕೃಷ್ಣಾ ನದಿ ಮೂಲಕ ರಾಜ್ಯಕ್ಕೆ ಮಂಗಳವಾರದಿಂದ 1.37 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವುದಾಗಿ ಮಹಾರಾಷ್ಟ್ರ ಸರ್ಕಾರವು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ತೆರಳಿದ್ದ ನಿಯೋಗಕ್ಕೆ ಭರವಸೆ ನೀಡಿತ್ತು.ಈ ಕುರಿತು ಉಪ ವಿಭಾಗಾಧಿಕಾರಿ ಡಾ.ರುದ್ರೇಶ ಘಾಳಿ ಅವರನ್ನು ಸಂಪರ್ಕಿಸಿದಾಗ `ಮಂಗಳವಾರ ಮಧ್ಯಾಹ್ನದವರೆಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿರುವ ಮಾಹಿತಿ ಇಲ್ಲ. ಬುಧವಾರ (ಏ.10) ಬೆಂಗಳೂರಿನಲ್ಲಿ ನೀರಾವರಿ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರರ ಸಭೆ ನಡೆಯಲಿದ್ದು, ಅಲ್ಲಿ ಈ ಕುರಿತು ಚರ್ಚೆಯಾಗಲಿದೆ' ಎಂದು ತಿಳಿಸಿದರು.ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಕೃಷ್ಣಾ ನದಿಯಲ್ಲಿ ನೀರು ಬತ್ತಿ, ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವುದರಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಾಪುರ ಜಿಲ್ಲೆಗಳ ನೂರಾರು ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ.

ಪ್ರತಿಕ್ರಿಯಿಸಿ (+)