ಭಾನುವಾರ, ಜೂನ್ 13, 2021
22 °C

ಕೊಲಂಬೊ ಗಣ್ಯರ ಭೇಟಿ: ಜಯಾ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): ಶ್ರೀಲಂಕಾದ ಅತಿ ಗಣ್ಯ ವ್ಯಕ್ತಿಗಳು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುವುದನ್ನು ಪ್ರೋತ್ಸಾಹಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.`ಶ್ರೀಲಂಕಾ ತಮಿಳರು ಮತ್ತು ಅವರ ಹಕ್ಕಿನ ವಿಷಯಕ್ಕೆ ಸಂಬಂಧಪಟ್ಟಂತೆ ಅಲ್ಲಿನ ಸರ್ಕಾರ ತೆಗೆದುಕೊಂಡ ಕ್ರಮಗಳು ರಾಜ್ಯದ ಜನರನ್ನು ಕೆರಳಿಸಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಈ ಹಿನ್ನೆಲೆಯಲ್ಲಿ ಒಂದು ವೇಳೆ ಗಣ್ಯ ವ್ಯಕ್ತಿಗಳು ಭೇಟಿ ನೀಡುವುದಾದಲ್ಲಿ ರಾಜ್ಯದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರ ಭೇಟಿಗೆ ಅನುಮತಿ ನೀಡಬೇಕು~ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.ಮಾಹಿತಿ ನೀಡದೇ ಕೊಲಂಬೊದಿಂದ ಅಧಿಕಾರಿಗಳು ಖಾಸಗಿ ಭೇಟಿ ನೀಡುತ್ತಿರುವುದರಿಂದ ರಾಜ್ಯ ಸರ್ಕಾರ ಹಲವು ಸಮಸ್ಯೆ ಎದುರಿಸುತ್ತಿದ್ದು, ಈ ಕುರಿತು ವಿದೇಶಾಂಗ ಮತ್ತು ಗೃಹ ವ್ಯವಹಾರ ಸಚಿವಾಲಯಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ.  ಶ್ರೀಲಂಕಾ ತಮಿಳರ ಹಕ್ಕುಗಳನ್ನು ರಕ್ಷಿಸುವಲ್ಲಿ ಕೊಲಂಬೊ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬುದೇ ರಾಜ್ಯದ ಜನತೆಯ ಅಭಿಪ್ರಾಯ. ಇಂಥ ಸ್ಥಿತಿಯಲ್ಲಿ ಭೇಟಿಗೆ ಮುನ್ನ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವುದು ಉತ್ತಮ ನಡವಳಿಕೆ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.