ಶುಕ್ರವಾರ, ಮೇ 7, 2021
26 °C

ಕೊಲೆ ಪ್ರಕರಣದ ತನಿಖೆ ಚುರುಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನ ಪ್ರಧಾನ ಕಚೇರಿಯ ಮುಖ್ಯ ವ್ಯವಸ್ಥಾಪಕ ಶಂಕರ ಪೂಜಾರಿ ಅವರ ಕೊಲೆ ಪ್ರಕರಣದ ತನಿಖೆಯನ್ನು ಜಯನಗರ ಪೊಲೀಸರು ತೀವ್ರಗೊಳಿಸಿದ್ದಾರೆ.ಶಂಕರ ಅವರ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿದ ದುಷ್ಕರ್ಮಿಗಳು ಚಿನ್ನದ ಸರ, ಎರಡು ಉಂಗುರಗಳನ್ನು ದೋಚಿದ್ದಾರೆ. ಆ ನಂತರ ಅಲ್ಮೇರಾದಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಹಣ- ಆಭರಣ ದೋಚವ ಉದ್ದೇಶದಿಂದ ಕೊಲೆ ಮಾಡಲಾಗಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆತ್ಮಹತ್ಯೆ: ಕೌಟುಂಬಿಕ ಕಲಹದಿಂದ ಬೇಸತ್ತ ರಮೇಶ್ (35) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‌ಎಎಲ್‌ನ ಕಾಡಬೀಸನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಮಂಜುಳಾ ಎಂಬುವರನ್ನು ವಿವಾಹವಾಗಿದ್ದ ಅವರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹದಿನೈದು ದಿನಗಳ ಹಿಂದೆ ಪತ್ನಿಯ ಮನೆಗೆ ಬಂದಿದ್ದ ರಮೇಶ್ ಮನೆಯ ಹಿಂದೆ ಇರುವ ಬಚ್ಚಲು ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಪತ್ನಿಯ ಜತೆ ಇದ್ದ ಭಿನ್ನಾಭಿಪ್ರಾಯವೇ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಆದರೆ ಇದೊಂದು ಕೊಲೆ ಎಂದು ರಮೇಶ್ ಅವರ ಪೋಷಕರು ದೂರಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.