ಗುರುವಾರ , ಮೇ 6, 2021
24 °C

ಕೊಲೆ ಪ್ರಕರಣ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಬ್ರಹ್ಮಣ್ಯಪುರ ಸಮೀಪದ ಹನುಮಗಿರಿ ಬೆಟ್ಟದ ಬಳಿ ನಡೆದಿದ್ದ ಅಭಿಷೇಕ್ (14) ಎಂಬ ಬಾಲಕನ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಅಭಿಷೇಕ್‌ನ ಸ್ನೇಹಿತರಾದ ಆರೋಪಿಗಳು ಬಾಲಕರಾಗಿದ್ದಾರೆ. ಅಭಿಷೇಕ್, ಆ ಆರೋಪಿಗಳಲ್ಲೆ ಒಬ್ಬನ ತಂಗಿಗೆ ಚುಡಾಯಿಸುತ್ತಿದ್ದ. ಇದರಿಂದ ಕೋಪಗೊಂಡಿದ್ದ ಆರೋಪಿ ಬಾಲಕ, ಸ್ನೇಹಿತರ ಜತೆ ಸೇರಿ ಆತನನ್ನು ಹನುಮಗಿರಿ ಬೆಟ್ಟದ ಬಳಿ ಕರೆದೊಯ್ದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಎಂದು ಸುಬ್ರಹ್ಮಣ್ಯಪುರ ಪೊಲೀಸರು ತಿಳಿಸಿದ್ದಾರೆ. ಇನ್‌ಸ್ಪೆಕ್ಟರ್ ಬಾಳೇಗೌಡ, ಎಸ್‌ಐ ಸಿದ್ದರಾಜು ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.